Friday, July 24, 2026
spot_imgspot_img
spot_imgspot_img

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ KSRTC ಬಸ್ಸು ಪಲ್ಟಿ; ರಕ್ಷಿಸಲು ಬಂದ ಆಂಬ್ಯುಲೆನ್ಸ್ ಚಾಲಕನಿಗೆ ಹಲ್ಲೆ

- Advertisement -
- Advertisement -

ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ರಾಜ್ಯ ಸಾರಿಗೆ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಹೊಳೆಯ ಬದಿಗೆ ಉರುಳಿ ಬಿದ್ದ ಘಟನೆ ನಡೆದಿದೆ. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ಊರ್ನಡ್ಕ ಎಂಬಲ್ಲಿ ಈ ಅವಘಡ ಸಂಭವಿಸಿದೆ.

ಚಳ್ಳಕೆರೆಯಿಂದ ಧರ್ಮಸ್ಥಳ ಮಾರ್ಗವಾಗಿ ಗುಂಡ್ಯ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ಉದನೆ – ಎಂಜಿರ ಮಧ್ಯದ ಊರ್ನಡ್ಕ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಈ ನಡುವೆ ರಕ್ಷಣಾ ಕಾರ್ಯಕ್ಕೆ ಆಗಮಿಸಿದ ಆಂಬ್ಯುಲೆನ್ಸ್ನ ಚಾಲಕನಿಗೆ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಆಂಬ್ಯುಲೆನ್ಸ್ ಚಾಲಕರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

- Advertisement -

Related news

error: Content is protected !!