Sunday, June 7, 2026
spot_imgspot_img
spot_imgspot_img

ಸುಬ್ರಹ್ಮಣ್ಯ: ವ್ಯಾಪಾರಿ ಮೇಲೆ ಹಲ್ಲೆ ಪ್ರಕರಣ; ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು..!

- Advertisement -
- Advertisement -

ಸುಬ್ರಹ್ಮಣ್ಯ: ಹಿಂದೂ ವ್ಯಾಪಾರಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ಸಿಬ್ಬಂದಿ ಮೇಲೆ ಪ್ರಕರಣ ದಾಖಲಾಗಿದೆ.

ಸುಬ್ರಹ್ಮಣ್ಯ ಷಷ್ಠಿ ಜಾತ್ರೆಯಂದು ಜ್ಯೂಸ್ ಮತ್ತು ಐಸ್ ಕ್ರೀಂ ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೋರ್ವನಿಗೆ ಸುಬ್ರಹ್ಮಣ್ಯ ಪೋಲಿಸ್ ಠಾಣೆಯ ಸಿಬ್ಬಂದಿಯೋರ್ವರು ಹಣ ನೀಡುವಂತೆ ಒತ್ತಾಯಿಸಿ, ಯುವಕನನ್ನು ಪೋಲಿಸ್ ವಸತಿ ಗೃಹಕ್ಕೆ ಕರೆದೊಯ್ದು ಚಿತ್ರ ಹಿಂಸೆ ನೀಡಿದ್ದಾರೆ ಎಂದು ಸುಬ್ರಹ್ಮಣ್ಯ ಪೋಲೀಸ್ ಠಾಣೆ ಸಿಬ್ಬಂದಿ ಭೀಮಣ್ಣ ಗೌಡ ವಿರುದ್ದ ಶಶಿಕಿರಣ್ ಎಂಬವರಿಂದ ಪ್ರಕರಣ ದಾಖಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯದ ಜಾತ್ರೋತ್ಸವ ಸಂದರ್ಭದಲ್ಲಿ ನಡೆದ ಘಟನೆಯಲ್ಲಿ, ಪೋಲೀಸ್ ಸಿಬ್ಬಂದಿ ವಿರುದ್ಧ 5000 ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪವಿದೆ.

- Advertisement -

Related news

error: Content is protected !!