



ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶಿಷ್ಟಾಚಾರ ವಿಭಾಗದ ನೌಕರ ಗೋಪಿನಾಥ್ ಅವರನ್ನು ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗೆ ವರ್ಗಾಯಿಸಿ ಸರ್ಕಾರವು ಆದೇಶವನ್ನು ಹೊರಡಿಸಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಶಿಷ್ಟಾಚಾರ ವಿಭಾಗದಲ್ಲಿ ನೌಕರಾಗಿದ್ದು ಗೋಪಿನಾಥ್ ನಂಬೀಷ್ ವರನ್ನು ಸರ್ಕಾರವು ಈ ಮೊದಲು ಕಾಸರಗೋಡು ಜಿಲ್ಲೆಯ ಶ್ರೀ ಮದನಂತೇಶ್ವರ ದೇವಾಲಯಕ್ಕೆ ವರ್ಗಾಯಿಸಿತ್ತು, ಇಲ್ಲಿ ಯಾವುದೇ ಹುದ್ದೆ ಇಲ್ಲದೇ ಇರುವುದರಿಂದ ಸ್ಪಷ್ಟೀಕರಣ ನೀಡಲು ಗೋಪಿನಾಥ್ ನಂಬೀಷ್ ಅವರು ಉಚ್ಚ ನ್ಯಾಯಾಲಯಕ್ಕೆ ರಿಟ್ ಅರ್ಜಿಯನ್ನು ಸಲ್ಲಿಸಿದರು.
ಇದನ್ನು ಪರಿಗಣಿಸಿದ ನ್ಯಾಯಾಲಯವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೌಖಿಕವಾಗಿ ಬೇರೆ ಕಡೆ ಖಾಲಿ ಇರುವ ಹುದ್ದೆಗೆ ವರ್ಗಾಯಿಸಲು ಸೂಚಿಸಿರುವ ಮೇರೆಗೆ ಗೋಪಿನಾಥ್ ನಂಬೀಷ್ ರವರನ್ನು ಮಂಗಳೂರು ತಾಲೂಕು ಕದ್ರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಿದೆ.