Friday, April 26, 2024
spot_imgspot_img
spot_imgspot_img

ಕಡಬ: ಲಾಡ್ಜ್ ವೊಂದರಲ್ಲಿ ಅಪ್ರಾಪ್ತ ಬಾಲಕಿಯ ನಿರಂತರ ಅತ್ಯಾಚಾರ!

- Advertisement -G L Acharya panikkar
- Advertisement -

ಕಡಬ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪುಸಲಾಯಿಸಿ ಲಾಡ್ಜ್ ಒಂದರಲ್ಲಿ ನಿರಂತರ ಅತ್ಯಾಚಾರಗೈದ ಪರಿಣಾಮ ಆಕೆ ಗರ್ಭಿಣಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಸುಬ್ರಹ್ಮಣ್ಯ ವ್ಯಾಪ್ತಿಯ ಏನೆಕಲ್ಲು ನಿವಾಸಿ ಅರುಣ್ ಎಂಬಾತ ಕಳೆದೊಂದು ವರ್ಷದಿಂದ 17 ವರ್ಷದ ಬಾಲಕಿಯನ್ನು ಪುಸಲಾಯಿಸಿ ಕಡಬ ಸಮೀಪದ ಕಳಾರ ಎಂಬಲ್ಲಿನ ಲಾಡ್ಜ್ ವೊಂದರಲ್ಲಿ ಬಲಾತ್ಕಾರದಿಂದ ನಿರಂತರ ಅತ್ಯಾಚಾರವೆಸಗಿದ್ದು, ಬಾಲಕಿಯ ಹೊಟ್ಟೆಯನ್ನು ನೋಡಿದ ಆಕೆಯ ತಾಯಿಯು ಸಂಶಯಗೊಂಡು ಸುಬ್ರಹ್ಮಣ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಪಾಸಣೆ ನಡೆಸಿದಾಗ ಆಕೆ 6 ತಿಂಗಳ ಗರ್ಭಿಣಿಯಾಗಿರುವುದು ತಿಳಿದು ಬಂದಿದೆ.

ಈ ಬಗ್ಗೆ ಆರೋಪಿ ಅರುಣ್ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆ ಸೇರಿದಂತೆ ಪೋಕ್ಸೋ ಕಾಯ್ದೆಯಡಿ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!