Friday, April 26, 2024
spot_imgspot_img
spot_imgspot_img

ಸುಬ್ರಹ್ಮಣ್ಯ ಚಂಪಾಷಷ್ಠಿ ಮಹಾರಥೋತ್ಸವ: ರಥಾರೂಢನಾದ ’ಕುಕ್ಕೆನಾಥ’ ನನ್ನು ಕಣ್ತುಂಬಿಕೊಂಡ ಭಕ್ತ ಸಮೂಹ

- Advertisement -G L Acharya panikkar
- Advertisement -

ಸುಬ್ರಹ್ಮಣ್ಯ: ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಮಹೋತ್ಸವವು ಜರುಗಿತು. ದೇವಳದ ರಾಜಮಾರ್ಗದಲ್ಲಿ ಸಂಭ್ರಮದ ಬ್ರಹ್ಮರಥೋತ್ಸವ ನಡೆಯಿತು.

ಮುಂಜಾನೆಯ ಧನು ಲಗ್ನ ಸುಮುಹೂರ್ತದಲ್ಲಿ ಬ್ರಹ್ಮರಥದಲ್ಲಿ ರಥಾರೂಢನಾದ ’ಕುಕ್ಕೆನಾಥ’ ನನ್ನು ನೆರೆದಿದ್ದ ಭಕ್ತ ಸಮೂಹ ಕಣ್ತುಂಬಿಕೊಂಡರು. ಭಕ್ತ ಜನ ಸಾಗರದ ನಡುವೆ ಶ್ರದ್ಧಾ ಭಕ್ತಿ ಹಾಗೂ ಸಂಭ್ರಮದಿಂದ ಚಂಪಾಷ‌ಷ್ಠಿ ಮಹಾರಥೋತ್ಸವ ಸಂಪನ್ನಗೊಂಡಿತು. ರಥೋತ್ಸವದ ಸಂದರ್ಭದಲ್ಲಿ ದೇವಾಲಯದ ಯಶಸ್ವಿನಿ ಆನೆ ಕೂಡ ರಾಜ ಗಾಂಭಿರ್ಯದಿಂದ ಹೆಜ್ಜೆ ಹಾಕಿತ್ತು.

ಕೋವಿಡ್ ಕಾರಣದಿಂದಾಗಿ ಪರ ಊರಿನ ಭಕ್ತರಿಗೆ ಪ್ರವೇಶ ನಿರ್ಬಂಧಿಸಿದ್ದರೂ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಜಾತ್ರೆ ವೇಳೆ ಸಂತೆ ವ್ಯಾಪಾರ ಅಂಗಡಿಗಳನ್ನು ನಿರ್ಬಂಧಿಸಲಾಗಿತ್ತು. ಜಾತ್ರಾ ವೇಳೆ ಗರಿಷ್ಠ ಪ್ರಮಾಣದಲ್ಲಿ ಕೋವಿಡ್‌-19 ನಿಯಮ ಪಾಲನೆ ಮಾಡಲು ಕ್ರಮ ಕೈಗೊಳ್ಳಲಾಗಿತ್ತು.

- Advertisement -

Related news

error: Content is protected !!