


ಬೆಂಗಳೂರು: ಪ್ರೀತಿಸಿದ ಯುವತಿ ಕೈ ಕೊಟ್ಟ ಕಾರಣ ಮನನೊಂದು ಬೆಂಗಳೂರು ಬಾಡಿ ಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಿರಣ್ (26) ಮೃತ ಬಾಡಿ ಬಿಲ್ಡರ್. ಕಿರಣ್ ಮೂರು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಬೇರೆ ಯುವಕನೊಂದಿಗೆ ತನ್ನ ಮದುವೆ ನಿಶ್ಚಯವಾಗಿದೆ ಎಂದು ಮದುವೆಯ ಆಮಂತ್ರಣ ಪತ್ರಿಕೆ ಹಾಗೂ ಹೊಸ ಸೀರೆಯನ್ನು ತೋರಿಸಿದ್ದಳು. ಇದರಿಂದ ಮನನೊಂದ ಕಿರಣ್ ಮನೆಗೆ ಬಂದು ರೂಂನ ಬಾಗಿಲು ಲಾಕ್ ಮಾಡಿಕೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯ ಡೋರ್ ಓಪನ್ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.
ಹಲವು ವರ್ಷಗಳಿಂದ ಜಿಮ್ ಟ್ರೈನರ್, ಬಾಡಿ ಬಿಲ್ಡಿಂಗ್ ಮಾಡುತ್ತಿದ್ದ ಕಿರಣ್ ವ್ಯಾಲೆಂಟೈನ್ಸ್ ಡೇಗೆ ಪ್ರೇಯಸಿಗೆ ಗಿಫ್ಟ್ ಕೊಡಲು ಸಿದ್ಧತೆ ಮಾಡಿಕೊಂಡಿದ್ದ. ಆದರೆ ಯುವತಿಗೆ ಮದುವೆಯ ನಿಶ್ಚಯವಾಗಿರುವ ವಿಷಯ ತಿಳಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿರುವ ಕಿರಣ್, ಆತ್ಮಹತ್ಯೆಗೆ ಪ್ರೇಯಸಿ ಹಾಗೂ ಆಕೆಯ ತಾಯಿಯೇ ಕಾರಣ ಅಂತಾ ಬರೆದಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.








