- Advertisement -
- Advertisement -




ವಿಟ್ಲ: ಕುಟುಂಬದಿಂದ ದೂರವಾಗಿ ಮನನೊಂದಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕನ್ಯಾನ ಗ್ರಾಮದ ಕೊಣಲೆ ಮಳವೆಲಿನಲ್ಲಿ ನಡೆದಿದೆ.
ಕೊಣಲೆ ಮಳವೆಲು ನಿವಾಸಿ ಈಶ್ವರ ನಾಯ್ಕ (51) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಈ ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ವಿಟ್ಲ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಬಾವಿಯಲ್ಲಿದ್ದ ಮೃತದೇಹವನ್ನು ಹೊರತೆಗೆಯಲು ಮುರಳೀಧರ ಅವರ ನೇತೃತ್ವದ ‘ಫ್ರೆಂಡ್ಸ್ ವಿಟ್ಲ’ ತಂಡದ ಸದಸ್ಯರು ನೆರವಾಗಿದ್ದಾರೆ. ಬಾವಿಯಿಂದ ಮೃತದೇಹವನ್ನು ಮೇಲಕ್ಕೆತ್ತಿದ ಬಳಿಕ, ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.ವಿಟ್ಲ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
- Advertisement -








