Saturday, April 27, 2024
spot_imgspot_img
spot_imgspot_img

ರಾಜ್ಯಾದ್ಯಂತ ಮತ್ತೆ `ಲಾಕ್ ಡೌನ್’ ಮಾಡುವ ಕುರಿತಂತೆ ಆರೋಗ್ಯ ಸಚಿವರು ಹೇಳುವುದೇನು..?

- Advertisement -G L Acharya panikkar
- Advertisement -

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮತ್ತೆ ಲಾಕ್ ಡೌನ್ ಮಾಡುವ ಕುರಿತಂತೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಸಂಬ0ಧಿಸಿದ0ತೆ ಗಂಭೀರ ಚರ್ಚೆ ನಡೆಸಿ ಲಾಕ್ ಡೌನ್ ಕುರಿತಂತೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಲಾಕ್ ಡೌನ್ ವಿಚಾರ ಸರ್ಕಾರದ ಗಮನದಲ್ಲಿದೆ ಇಂದು ಸಾಧಕ-ಬಾಧಕ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಇನ್ನು ಬೆಂಗಳೂರು ಕೊರೊನಾದ ಮೇಜರ್ ಪಾಯಿಂಟ್. ಇಲ್ಲಿಂದಲೇ ಕಂಟ್ರೋಲ್ ಮಾಡಿದರೆ ಎಲ್ಲವೂ ಸಾಧ್ಯ ಎಂದಿದ್ದಾರೆ.

ಪ್ರಸ್ತುತ್ನ ಬೆಂಗಳೂರಿನಲ್ಲಿ 20 ಸಾವಿರಕ್ಕೂ ಅಧಿಕ ಹಾಗೂ ಬೇರೆ ಜಿಲ್ಲೆಗಳಲ್ಲಿ ಸಹ ಕೊರೊನಾ ಸೋಂಕಿನ ಪ್ರಕರಗಳಲ್ಲಿ ಭಾರೀ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರಿನ ಸಮಸ್ಯೆಯನ್ನು ಗಮನದಲ್ಲಿರಿಸಿಕೊಂಡು ಲಾಕ್‌ಡೌನ್ ಮಾಡಲಾಗುತ್ತದೆ. ಎಕ್ಸ್ಫರ್ಟ್ ಸಮಿತಿಯ ಸಲಹೆಯನ್ನು ಪಡೆಯಲಾಗುತ್ತದೆ. ಹೇಗೆ, ಯಾವ ರೀತಿಯಲ್ಲಿ ವ್ಯವಸ್ಥೆ ಮಾಡಿಕೊಂಡು ಲಾಕ್‌ಡೌನ್ ಮಾಡಬೇಕು ಎಂಬುವುದನ್ನು ಚರ್ಚೆ ಮಾಡಲಾಗುತ್ತದೆ ಎಂದಿದ್ದಾರೆ.

- Advertisement -

Related news

error: Content is protected !!