Thursday, June 25, 2026
spot_imgspot_img
spot_imgspot_img

ಚಿಕ್ಕಮಗಳೂರು: ನವವಧು ನೇಣು ಬಿಗಿದು ಆತ್ಮಹತ್ಯೆಗೆ ಶರಣು

- Advertisement -
- Advertisement -

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ತರೀಕೇರಿ ತಾಲೂಕಿನ ಲಿಂಗದಹಳ್ಳಿ ಹೋಬಳಿಯ ಗುಳ್ಳದಮನೆಯಲ್ಲಿ ಮದುವೆಯಾಗಿ ಒಂದು ತಿಂಗಳಲ್ಲೇ ನವವಧು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.ಆತ್ಮಹತ್ಯೆಗೆ ಶರಣಾದ ನವವಧು ಬಿಂದು (20) ಎಂದು ತಿಳಿದು ಬಂದಿದೆ.ಒಂದು ತಿಂಗಳ ಹಿಂದೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಮೂಲದ ಬಿಂದು ಕುಮಾರ್ ಎಂಬವರನ್ನು ಬಿಂದು ಮದುವೆಯಾಗಿದ್ದರು ಎಂದು ತಿಳಿದು ಬಂದಿದೆ.ಬಿಂದು ಹಾಸ್ಟೆಲ್ ನಲ್ಲಿದ್ದುಕೊಂಡು ಓದುತ್ತೀನಿ ಎಂದು ಪಟ್ಟು ಹಿಡಿದಿದ್ದಳು. ಆದರೆ ಮನೆಯಿಂದಲೇ ಓದುತ್ತೀನಿ ಎಂದು ಪತಿ ಹೇಳಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.ಈ ಕುರಿತು ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!