Friday, September 11, 2026
spot_imgspot_img
spot_imgspot_img

ಬೆಳ್ತಂಗಡಿ: ನವವಿವಾಹಿತ ನೇಣು ಬಿಗಿದು ಆತ್ಮಹತ್ಯೆಗೆ ಶರಣು

- Advertisement -
- Advertisement -

ಬೆಳ್ತಂಗಡಿ: ಮೈಸೂರಿನ ಕಂಪೆನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಬೆಳ್ತಂಗಡಿಯ ನವವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.13 ರಂದು ಮೈಸೂರಿನಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ನವವಿವಾಹಿತ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾ.ಪಂ ವ್ಯಾಪ್ತಿಯ ನಾಲ್ಕೂರು ಗ್ರಾಮದ ಮಜಲಡ್ಡ ನಿವಾಸಿಯಾಗಿರುವ ಕರಿಯ ಪೂಜಾರಿಯವರ ಪುತ್ರ ಕಿರಣ್ (35) ಎಂದು ತಿಳಿದು ಬಂದಿದೆ.ಕಿರಣ್ ಅವರು ಕಳೆದ 12 ವರ್ಷಗಳಿಂದ ಮೈಸೂರಿನ ಖಾಸಗಿ ಕಂಪನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಉತ್ತಮ ಸಂಬಳವು ಇತ್ತು, ಕಳೆದ ಮೂರೂವರೆ ತಿಂಗಳ ಹಿಂದೆ ಅವರಿಗೆ ಮದುವೆಯಾಗಿತ್ತು.ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸ್‌ ತನಿಖೆಯಿಂದ ತಿಳಿದು ಬರಬೇಕಾಗಿದೆ.ಈ ಸಂಬಂಧ ಮೈಸೂರು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!