Saturday, September 5, 2026
spot_imgspot_img
spot_imgspot_img

ಪತಿ ಮನೆಯವರ ಕಿರುಕುಳದಿಂದ ಉಪನ್ಯಾಸಕಿ ಆತ್ಮಹತ್ಯೆ

- Advertisement -
- Advertisement -

ದೇವನಹಳ್ಳಿ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪತಿ ಮನೆಯವರ ಕಿರುಕುಳದಿಂದ ಬೇಸತ್ತ ಉಪನ್ಯಾಸಕಿ ನೀರಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿ ಪುಷ್ಪಾವತಿ (30) ಎಂದು ತಿಳಿದು ಬಂದಿದೆ.11 ತಿಂಗಳ ಹಿಂದೆ ತಪಸ್ಸಿಹಳ್ಳಿಯ ವೇಣು ಎಂಬವರ ಜೊತೆ ಇವರ ವಿವಾಹವಾಗಿತ್ತು. ಮದುವೆ ನಂತರ ಪತಿ ಮನೆಯಲ್ಲಿ ಪುಷ್ಪಾವತಿಗೆ ನಿರಂತರ ಕಿರುಕುಳ ನೀಡಲಾಗುತ್ತಿತ್ತು.ವರದಕ್ಷಿಣೆ, ನಿವೇಶನ ಕೊಡಿಸುವಂತೆ ಪೀಡಿಸುತ್ತಿದ್ದರು ಎಂದು ಪುಷ್ಪಾವತಿ ಆರೋಪಿಸಿದ್ದಾರೆ.

ಈ ಕುರಿತು ವೀಡಿಯೊ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.ಪುಷ್ಪಾವತಿ ನಾಪತ್ತೆ ಆಗಿರುವ ಬಗ್ಗೆ ದೊಡ್ಡಬಳ್ಳಾಪುರ ಮಹಿಳಾ ಠಾಣೆಯಲ್ಲಿ ಕುಟುಂಬಸ್ಥರು ಪ್ರಕರಣ ದಾಖಲಿಸಿದ್ದರು ಎಂದು ಹೇಳಲಾಗಿದೆ.

- Advertisement -

Related news

error: Content is protected !!