Wednesday, July 22, 2026
spot_imgspot_img
spot_imgspot_img

ಉಪನ್ಯಾಸಕರ ತರಾಟೆಗೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ?- ಆಕ್ರೋಶಿತ ವಿದ್ಯಾರ್ಥಿಗಳಿಂದ ಪ್ರತಿಭಟನೆ

- Advertisement -
- Advertisement -

ಬಳ್ಳಾರಿ: ನಗರದ ಸಂಜಯ್ ಗಾಂಧಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಡಿಪ್ಲೊಮಾ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.ಗುಗ್ಗರಹಟ್ಟಿ ನಿವಾಸಿ ಅರವಿಂದ್ ಮೃತ ವಿದ್ಯಾರ್ಥಿ. ಇವರು ಮಂಗಳವಾರ ರಾತ್ರಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳವಾರ ಕಾಲೇಜಿನಲ್ಲಿ ಉಪನ್ಯಾಸಕರು ಅರವಿಂದ್ ರನ್ನು ತರಾಟೆಗೈದಿದ್ದು, ಇದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ, ವಿದ್ಯಾರ್ಥಿಗಳು ಇಂದು ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಕಾಲೇಜಿನಲ್ಲಿ ಪ್ರೊಫೆಸರ್ ಹಾಗೂ ಹೆಡ್ ಆಫ್‌ ಡಿಪಾರ್ಟೆಂಟ್ (HOD) ಬೈದ ಘಟನೆ ಆತ್ಮಹತ್ಯೆಗೆ ಕಾರಣ ಕಎಂಬ ಆರೋಪ ಕೇಳಿಬಂದಿದೆ.ಮಾಹಿತಿಯ ಪ್ರಕಾರ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಸಣ್ಣ ಮಟ್ಟಿನ ಜಗಳ ನಡೆದ ಹಿನ್ನೆಲೆ ಅರವಿಂದ್ ರ ಪೋಷಕರನ್ನು ಕಾಲೇಜಿಗೆ ಕರೆಸಲಾಗಿತ್ತು.

ಈ ವೇಳೆ ಎಚ್‌ಓಡಿಯೊಬ್ಬರನ್ನು ಅರವಿಂದ್ ನನ್ನು ಪೋಷಕರ ಸಮ್ಮುಖದಲ್ಲೇ ತೀವ್ರ ತರಾಟೆಗೈದಿದ್ದು “ಹೀಗೆ ಗಲಾಟೆ ಮಾಡುವ ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿ ಇರಿಸಲು ಸಾಧ್ಯವಿಲ್ಲ, ಇದು ಕೊನೆಯ ಎಚ್ಚರಿಕೆ’ ಎಂದು ಹೇಳಿ ಕಳುಹಿಸಿದ್ದರೆನ್ನಲಾಗಿದೆ. ಇದರಿಂದ ತೀವ್ರವಾಗಿ ನೊಂದಿದ್ದ ಅರವಿಂದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.ಇಂದು ಕಾಲೇಜಿನಲ್ಲಿ ಶ್ರದ್ಧಾಂಜಲಿ ಸಭೆ ನಡೆದ ಬಳಿಕ ಆಕ್ರೋಶಗೊಂಡ ವಿದ್ಯಾರ್ಥಿಗಳು ಕುರ್ಚಿ-ಟೇಬಲ್ ಒಡೆದು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸ್ಥಳಕ್ಕೆ ಬ್ರೂಸ್ ಪೇಟ್ ಪೊಲೀಸ್‌ ಠಾಣೆ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿ, ಪ್ರಕರಣದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!