- Advertisement -
- Advertisement -
ಸುಳ್ಯ: ಸುಳ್ಯದಿಂದ ಪಾಣತ್ತೂರು ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಆರು ಜನ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಭಾನುವಾರದಂದು ಪಾಣತ್ತೂರು ಕಲ್ಲಪ್ಪಳ್ಳಿ ಬಳಿ ನಡೆದಿದೆ.

ಪುತ್ತೂರಿನ ಸುರಕ್ಷಾ ಸಂಸ್ಥೆಯ ಖಾಸಗಿ ಬಸ್ ಮದುವೆ ಸಮಾರಂಭಕ್ಕೆಂದು ಜನರನ್ನು ಕರೆದೊಯ್ಯುತ್ತಿದ್ದ ವೇಳೆ ಪಾಣತ್ತೂರು ಕಲ್ಲಪ್ಪಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ಸಮೀಪದ ವ್ಯಕ್ತಿಯೋರ್ವರ ಮನೆಗೂ ಡಿಕ್ಕಿ ಹೊಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.


ಮರಣ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಸದ್ಯ ಆರು ಮಂದಿ ಮೃತಪಟ್ಟ ಮಾಹಿತಿ ಲಭ್ಯವಾಗಿದೆ. ಹಲವರು ಗಂಭೀರ ಗಾಯಗೊಂಡಿದ್ದಾರೆ. ಕೆಲವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತ ನಡೆದ ಸ್ಥಳ ಕೇರಳ ಗಡಿ ಪ್ರದೇಶವಾಗಿರೋದರಿಂದ ರಾಜಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






- Advertisement -