Tuesday, April 20, 2021
spot_imgspot_img
spot_imgspot_img

ಸುಳ್ಯ: ಕಾಡಾನೆ ದಾಳಿಗೆ ಓರ್ವ ಬಲಿ!

ಸುಳ್ಯ: ಕಾಡಾನೆ ದಾಳಿಗೆ ಒಳಗಾದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡು ನಂತರದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಕಲ್ಮಕಾರಿನಿಂದ ವರದಿಯಾಗಿದೆ.

ನೀರಿನ ಪೈಪ್ ಸರಿ ಮಾಡಲು ಹೋದ ವೃದ್ಧರಾದ ಶಿವರಾಮ ಗೌಡ ಎಂಬವರು ಹಿಂತಿರುಗಿ ಬಾರದ ಕಾರಣ ಮನೆಯವರು ಹುಡುಕಾಟ ನಡೆಸಿದ್ದರು. ಈ ವೇಳೆ ಆನೆ ದಾಳಿ ಮಾಡಿ ಇವರು ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಇದ್ದರು. ಅವರನ್ನು ತಕ್ಷಣವೇ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

MOST POPULAR

HOT NEWS

Related news

error: Content is protected !!