Thursday, June 18, 2026
spot_imgspot_img
spot_imgspot_img

ಸುಳ್ಯ: ಪಾದಚಾರಿಗೆ ಬೈಕ್ ಡಿಕ್ಕಿ – ಮೂವರಿಗೆ ಗಾಯ

- Advertisement -
- Advertisement -

ಸುಳ್ಯ: ಪಾದಚಾರಿಗೆ ಬೈಕ್ ವೊಂದು ಢಿಕ್ಕಿಯಾಗಿ ಮೂವರು ಗಾಯಗೊಂಡ ಘಟನೆ ನಡೆದಿದೆ. ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡೀಲ್ ಎಂಬಲ್ಲಿ ಸಂಭವಿಸಿದೆ.

ಮಂಡೆಕೋಲು ಗ್ರಾಮದ ಭವಾನಿಶಂಕರ್, ಅವರ ಪತ್ನಿ ಲೀಲಾವತಿ ಹಾಗೂ ಅವರ ಇಬ್ಬರು ಮಕ್ಕಳು ಸುಳ್ಯದಿಂದ ಮಂಡೆಕೋಲು ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಪಡೀಲ್ ಎಂಬಲ್ಲಿ ಸವಾರನ ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಗುದ್ದಿದೆ. ಬೈಕ್ ನಲ್ಲಿದ್ದ ನಾಲ್ವರು ರಸ್ತೆಗೆಸೆಯಲ್ಪಟ್ಟಿದ್ದಾರೆ.

ಅಪಘಾತಕ್ಕೊಳಗಾದ ಪಾದಚಾರಿ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳು ಮೂವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!