Monday, June 15, 2026
spot_imgspot_img
spot_imgspot_img

ಸುಳ್ಯ: ಬೈಕ್‌ ಕಳ್ಳತನ; ಆರೋಪಿಯ ಬಂಧನ

- Advertisement -
- Advertisement -

ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಬೈಕ್‌ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಕೊಡಗು ಸೋಮವಾರಪೇಟೆ ಬಸವನಹಳ್ಳಿ ನಿವಾಸಿಯಾದ ಆರೋಪಿ ಸುಬ್ರಮಣಿ (26) ಪ್ರಕರಣದ ಆರೋಪಿ. ಈತನ ವಿರುದ್ಧ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್‌ ಕಳ್ಳತನದ ಕುರಿತು ಸೆ.16ರಂದು ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಸುಳ್ಯ ಠಾಣಾ ಪೊಲೀಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿ ಕ್ಷೀಪ್ರ ಕಾರ್ಯಾಚರಣೆ ನಡೆಸಿ, ಸುಳ್ಯದ ಆಲೆಟ್ಟಿ ಗ್ರಾಮದ ಸರಳಿಪಂಜ ಎಂಬಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಆರೋಪಿ ಈ ಹಿಂದೆ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಹಾಗೂ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿರುವುದು ಅಲ್ಲದೆ, ಇತ್ತೀಚೆಗೆ ಕೆಲ ದಿನಗಳ ಹಿಂದೆ ಸುಳ್ಯ ಬಸ್ ನಿಲ್ದಾಣದಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರ ಪರ್ಸ್ ತೆಗೆದುಕೊಂಡು ಹೋಗಿದ್ದು ತನಿಖೆ ವೇಳೆ ತಿಳಿದುಬಂದಿದೆ.

- Advertisement -

Related news

error: Content is protected !!