




ಸುಳ್ಯ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಆರೋಪದಡಿ ನಾಲ್ಕು ಲಾರಿಗಳನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ನಡೆದಿದೆ.
ಆ.24ರಂದು ಬೆಳಿಗ್ಗೆ, 4 ಲಾರಿಗಳಲ್ಲಿ ಮುರೂರು ಕಡೆಯಿಂದ ಸುಳ್ಯ ಮಾರ್ಗವಾಗಿ ಮಡಿಕೇರಿ ಕಡೆಗೆ, ಅಕ್ರಮವಾಗಿ ಕೆಂಪುಕಲ್ಲು ಸಾಗಾಟ ಮಾಡುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಿಗೆ ಮಾಹಿತಿ ಬಂದ ಮೇರೆಗೆ ಠಾಣಾ ಸಿಬ್ಬಂದಿಗಳೊಂದಿಗೆ ಜಾಲ್ಸೂರು ಗ್ರಾಮದ ಅಡ್ಕಾರು ಬಳಿ ವಾಹನಗಳನ್ನು ತಡೆದು ಪರಿಶೀಲಿಸಿದಾಗ, 4 ಲಾರಿಗಳಲ್ಲಿ ಯಾವುದೇ ಅನುಮತಿಯಿಲ್ಲದೇ, ಅಕ್ರಮವಾಗಿ ಕೆಂಪುಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿರುತ್ತದೆ.
ಈ ಬಗ್ಗೆ ಮುಂದಿನ ಕಾನೂನು ಕ್ರಮಕ್ಕಾಗಿ 4 ಲಾರಿಗಳನ್ನು ಸ್ವಾಧೀನಪಡಿಸಲಾಗಿದ್ದು, ಅವುಗಳ ಮೌಲ್ಯ ಅಂದಾಜು 45 ಲಕ್ಷ ಹಾಗೂ ಒಟ್ಟು 1750 ಕಲ್ಲುಗಳ ಮೌಲ್ಯ ₹ 43,750 ಆಗಿದ್ದು, ಲಾರಿಗಳ ಚಾಲಕರು ಹಾಗೂ ಮಾಲಕರುಗಳ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ ನಂ: 91/2025 ಕಲಂ: 303(2) BNS & 4(1) 21MMRD& KARNATAKA MINOR MINERAL CONSISTENT RULE 3.44&66(1) &192(a)IMV Act ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.








