Sunday, June 7, 2026
spot_imgspot_img
spot_imgspot_img

ಸುಳ್ಯ: ಅಪ್ರಾಪ್ತೆಯನ್ನು ಗರ್ಭಾವತಿಯನ್ನಾಗಿದ ಯುವಕ; ಅತ್ಯಾಚಾರ ಆರೋಪದಡಿ ಯುವಕ ಅರೆಸ್ಟ್

- Advertisement -
- Advertisement -

ಸುಳ್ಯ: ಅಪ್ರಾಪ್ತೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಈಗ ನಾಲ್ಕು ತಿಂಗಳ ಗರ್ಭಿಣಿಯಾಗಿ, ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾದ ಘಟನೆ ನಡೆದಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಅತ್ಯಾಚಾರ ಆರೋಪದಡಿ ಯುವಕನನ್ನು ಬಂಧಿಸಲಾಗಿದೆ.

ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್‌ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭವತಿಯಾಗಿದ್ದಳು. ಜು. 7ರಂದು ಬಾಲಕಿ ಹೊಟ್ಟೆನೋವು ಎಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಈ ವೇಳೆ ವೈದ್ಯರು ಪರೀಕ್ಷಿಸಿ ಸ್ಕ್ಯಾನಿಂಗ್‌ ಮಾಡಿದಾಗ ಬಾಲಕಿ 4 ತಿಂಗಳ ಗರ್ಭಿಣಿ ಆಗಿರುವ ವಿಚಾರ ತಿಳಿದುಬಂದಿದೆ.

ಈ ಬಗ್ಗೆ ಬಾಲಕಿಯಲ್ಲಿ ವಿಚಾರಿಸಿದಾಗ ಕಲ್ಮಡ್ಕದ ಕಾರ್ತಿಕ್‌ ದೈಹಿಕ ಸಂಪರ್ಕ ಎಸಗಿರುವುದನ್ನು ತಿಳಿಸಿದ್ದಾಗಿ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಬೆಳ್ಳಾರೆ ಠಾಣೆಗೆ ನೀಡಿದ ದೂರಿನಂತೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!