Tuesday, June 30, 2026
spot_imgspot_img
spot_imgspot_img

ಪ್ರೀತಿಯ ನಾಟಕವಾಡಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಆರೋಪ; ಯುವಕನ ಬಂಧನ!

- Advertisement -
- Advertisement -

ಸುಳ್ಯ: ಅಪ್ರಾಪ್ತ ಬಾಲಕಿಯೊಂದಿಗೆ ಪ್ರೀತಿಯ ನಾಟಕವಾಡಿ ಅತ್ಯಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ಯುವಕನನ್ನು ಸುಳ್ಯ ಪೋಲೀಸರು ಬಂಧಿಸಿದ್ದಾರೆ.

ಬಂಧಿತ ಯುವಕ ಮಂಡೆಕೋಲು ಗ್ರಾಮದ ಸೊರಂಜ ಜಿತೇಶ್ ಎನ್ನಲಾಗಿದೆ. ಹೈಸ್ಕೂಲ್ ವಿದ್ಯಾರ್ಥಿನಿಯೊಬ್ಬಳನ್ನು ಇನ್ ಸ್ಟ್ರಾಗ್ರಾಂನಲ್ಲಿ ಪರಿಚಯಿಸಿಕೊಂಡ ಈತ ಆಕೆಯ ಜತೆ ಪ್ರೀತಿಯ ನಾಟಕವಾಡಿ ಮನೆಯಿಂದ ಕರೆದೊಯ್ದು ಅತ್ಯಾಚಾರ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

ಘಟನೆ ಬಗ್ಗೆ ಅಪ್ರಾಪ್ತ ಬಾಲಕಿಯ ಮನೆಯವರು ಸುಳ್ಯ ಪೊಲೀಸರಿಗೆ ದೂರು ನೀಡಿದ್ದು, ಆರೋಪಿ ಯುವಕನನ್ನು ಅಡ್ಕಾರ್ ಬಳಿ ಬಂಧಿಸಿದ್ದಾರೆಂದು ತಿಳಿದು ಬಂದಿದೆ. ಯುವಕ ವಿದ್ಯಾರ್ಥಿನಿಯನ್ನು ಕರೆದೊಯ್ಯುತ್ತಿದ್ದ ಆಲ್ಟೋ ಕಾರನ್ನು ಕೂಡಾ ಪೊಲೀಸರು ವಶಪಡಿಸಿಕೊಂಡಿದ್ದಾರೆ.

driving
- Advertisement -

Related news

error: Content is protected !!