Friday, June 19, 2026
spot_imgspot_img
spot_imgspot_img

? *ಬೆಳ್ಳಂಬೆಳಗ್ಗೆ ಗುಂಡಿಕ್ಕಿ ಕೊಲೆ* *ಬಿಜೆಪಿ ಮುಖಂಡ ಬಾಲಚಂದ್ರ ಕಳಗಿ ಕೊಲೆ ಆರೋಪಿ ಸಂಪತ್ ಕಲ್ಲುಗುಂಡಿ ಕೊಲೆಯಾದ ವ್ಯಕ್ತಿ*

- Advertisement -
- Advertisement -

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಇಂದು ಬೆಳ್ಳಂಬೆಳ್ಳಗ್ಗೆ ಶೂಟೌಟ್ ನಡೆದಿದ್ದು, ಜನತೆಯನ್ನು ಬೆಚ್ಚಿ ಬೀಳಿಸಿದೆ. ಸುಳ್ಯ ನಗರದ ಶಾಂತಿನಗರದಲ್ಲಿ ಗುರುವಾರ ಮುಂಜಾನೆ ಈ ಘಟನೆ ನಡೆದಿದ್ದು, ಇಲ್ಲಿ ವಾಸವಾಗಿದ್ದ ವ್ಯಕ್ತಿಯೋರ್ವರಿಗೆ ಕಾರಿನಲ್ಲಿ ಬಂದು ಅಪರಿಚಿತರು ಗುಂಡಿಕ್ಕಿದ್ದಾರೆ.

ಗುಂಡೇಟು ತಗಲಿದ ವ್ಯಕ್ತಿಯನ್ನು ಸಂಪತ್ ಎಂದು ಗುರುತಿಸಲಾಗಿದೆ. ಈತ ಬಿಜೆಪಿ‌ ಹಾಗೂ ಸಾಮಾಜಿಕ ಮುಖಂಡ ಬಾಲಚಂದ್ರ ಕಳಗಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಇಂದು 6 ಗಂಟೆಗೆ ಸಂಪತ್ ತನ್ನ ನಿವಾಸದಿಂದ ಕಾರಿನಲ್ಲಿ ತೆರಳುತ್ತಿದ್ದ ಸಂದರ್ಭ ಅಲ್ಲಿಗೆ ಬಂದ ದುಷ್ಕರ್ಮಿಗಳು ಅವರ ಮೇಲೆ ದಾಳಿ ನಡೆಸಿದ್ದಾರೆ. ಮೊದಲು ಕಾರಿನ ಗ್ಲಾಸಿಗೆ ಗುಂಡು ಹಾರಿಸಿದ್ದಾರೆ.

ಆ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಂಪೌಂಡ್ ಗೆ ತಾಗಿ ನಿಂತಿದೆ. ಅಲ್ಲಿಂದ ತಪ್ಪಿಸಿಕೊಂಡ ಸಂಪತ್ ಸಮೀಪದಲ್ಲಿದ್ದ ಕಾಂತಪ್ಪ ಎಂಬವರ ಮನೆಗೆ ಓಡಿ ಹೋಗಿದ್ದಾರೆ. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಹಿಂಬಾಲಿಸಿಕೊಂಡು ಗುಂಡು ಹಾರಿಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಗುಂಡೇಟಿನಿಂದ ತೀವ್ರ ಜಖಂಗೊಂಡ ಸಂಪತ್ ಮನೆಯೊಳಗಡೆ ಬಿದ್ದು ಮೃತಪಟ್ಟರು. ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ನವೀನ್ಚಂದ್ರ ಜೋಗಿ, ಎಸ್.ಐ. ಹರೀಶ್ ಎಂ.ಆರ್. ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಬಂದೋಬಸ್ತ್ ಏರ್ಪಡಿಸಿದ್ದಾರೆ. ನೂರಾರು ಮಂದಿ ಕುತೂಹಲಿಗರು ಘಟನಾ ಸ್ಥಳದಲ್ಲಿ ಸೇರಿದ್ದಾರೆ.

- Advertisement -

Related news

error: Content is protected !!