- Advertisement -
- Advertisement -



ಸುಳ್ಯ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಕಾರಿನಲ್ಲಿದ್ದವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಸುಳ್ಯ-ಬೆಳ್ಳಾರೆ ರಸ್ತೆಯ ಬೆಂಗಮಲೆಯಲ್ಲಿ ಸೋಮವಾರ ಈ ಘಟನೆ ಸಂಭವಿಸಿದೆ.
ಸುಳ್ಯದ ಬ್ಯಾಂಕ್ ಮ್ಯಾನೇಜರ್ ಉತ್ಸವ್ ಚಕ್ರವರ್ತಿ ಮತ್ತು ಇನ್ನೊಬ್ಬ ವ್ಯಕ್ತಿ ಸಾಲ ವಸೂಲಾತಿ ಕೆಲಸಕ್ಕಾಗಿ ಸುಳ್ಯದ ಉಮ್ಮರ್ ಅವರಿಗೆ ಸೇರಿದ ಬಾಡಿಗೆ ಕಾರಿನಲ್ಲಿ ಪಂಜ ಕಡೆಗೆ ಪ್ರಯಾಣಿಸುತ್ತಿದ್ದರು. ಬೆಳ್ಳಾರೆಯಿಂದ ಸುಳ್ಯಕ್ಕೆ ಹಿಂತಿರುಗುತ್ತಿದ್ದಾಗ, ಬೆಂಗಮಲೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದು ಕಾರು ನಜ್ಜುಗುಜ್ಜಾಗಿದೆ ಎನ್ನಲಾಗಿದೆ.
ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.
- Advertisement -








