Wednesday, July 22, 2026
spot_imgspot_img
spot_imgspot_img

ಸುಳ್ಯ: 25 ಅಡಿ ಆಳದ ಬಾವಿಗೆ ಬಿದ್ದ ಕಾಡಾನೆ; ಅರಣ್ಯ ಇಲಾಖೆಯಿಂದ ರಕ್ಷಣೆ

- Advertisement -
- Advertisement -

ಸುಳ್ಯ: ಸುಮಾರು 25 ಅಡಿ ಆಳದ ಪಾಳುಬಿದ್ದ ಬಾವಿಗೆ ಬಿದ್ದಿದ್ದ ಕಾಡಾನೆಯೊಂದನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ರಕ್ಷಿಸಿದ ಘಟನೆ ಪೆರಾಜೆ ಸಮೀಪದ ಕಲ್ಚರ್ಪೆಯಲ್ಲಿ ಸೋಮವಾರ ನಡೆದಿದೆ.

ಸುಳ್ಯ ಸಮೀಪದ ಪೆರಾಜೆ ಬಳಿಯ ಕಲ್ಬರ್ಪೆಯಲ್ಲಿ ಅಂದಾಜು 20 ರಿಂದ 22 ವರ್ಷ ಪ್ರಾಯದ ಗಂಡಾನೆಯೊಂದು ರಾಮ ನಾಯ್ಕ ಅವರ ಅರಣ್ಯದಂಚಿನ ತೋಟದ ಬದಿಯಲ್ಲಿದ್ದ 25 ಅಡಿ ಆಳದ ಪಾಳು ಬಾವಿಗೆ ಭಾನುವಾರ ರಾತ್ರಿ 11.30ರ ವೇಳೆಗೆ ಬಿದ್ದಿದೆ. ಈ ವೇಳೆ ಕಾಡಾನೆಯ ರೋಧನೆಯನ್ನು ಕೇಳಿದ ರಾಮ ನಾಯ್ಕ ಅವರ ಮನೆಯವರು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದು, ಕೂಡಲೇ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಿದ ಸಿಬ್ಬಂದಿಗಳು ಬೆಳಿಗ್ಗೆ 6 ಗಂಟೆಗೆ ಕಾರ್ಯಾಚರಣೆ ಆರಂಭಿಸಿದರು.

ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಬೆಳಗ್ಗೆ 6 ಗಂಟೆಗೆ ಆನೆಯ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಸುಮಾರು ಎಂಟು ಗಂಟೆಯಿಂದ ಹಿಟಾಚಿ ಯಂತ್ರದ ಮೂಲಕ ಕಾರ್ಯಾಚರಣೆ ನಡೆಸಿ ಬಾವಿಯ ಒಂದು ಬದಿಯಿಂದ ಆಳ ಮಾಡಿ ದಾರಿ ಮಾಡಿ ಕೊಡಲಾಯಿತು. ಮಧ್ಯಾಹ್ನ 12.50ರ ವೇಳೆಗೆ ಹಿಟಾಚಿ ತೋಡಿದ ದಾರಿಯ ಮೂಲಕ ಮೇಲಕ್ಕೆ ಬಂತು. ಸುಮಾರು 6 ರಿಂದ 7 ಗಂಟೆ ಕಾರ್ಯಾಚರಣೆ ಅರಣ್ಯ ಇಲಾಖೆ ನಡೆಸಿತ್ತು.

ಬಾವಿಯಿಂದ ಮೇಲೆದ್ದು ಬಂದ ಆನೆಯು ಮೇಲಕ್ಕೆ ಬಂದು ತೋಟದ ಮೇಲಿನ ಭಾಗದ ರಾಷ್ಟ್ರೀಯ ಹೆದ್ದಾರಿ ಕಡೆ ಓಡಿತ್ತು. ಬಾವಿಯಿಂದ ಮೇಲೆ ಬಂದಾಗ ಎದುರಿಗಿದ್ದ ಹಿಟಾಚಿಗೆ ಹಾದು ಕೊಂಡು ಕೆಳ ಭಾಗಕ್ಕೆ ನುಗ್ಗಿತು. ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿಗಳು ಪಟಾಕಿ ಸಿಡಿಸಿ ಆನೆಯನ್ನು ದೂರಕ್ಕೆ ಸರಿಸಿತು. ಕೆಲ ಕಾಲದ ಬಳಿಕ ತೋಟಕ್ಕೆ ತೆರಳಿ ಅದೇ ದಾರಿಯಾಗಿ ಬಂದ ಕಾಡಾನೆ ಬಳಿಕ ಹಿಂತಿರುಗಿ ಬಂದು ಪೂಮಲೆ ಕಾಡಿನತ್ತ ಸಾಗಿತ್ತು.

ಕಾರ್ಯಾಚರಣೆಯಲ್ಲಿ ಪುತ್ತೂರು, ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿಗಳು, ಸುಳ್ಯ ಪೊಲೀಸ್‌ ಉಪ ನಿರೀಕ್ಷಕರು, ಪಶು ವೈದ್ಯಾಧಿಕಾರಿ, ಆನೆ ಕಾರ್ಯಪಡೆಯ ಸಿಬ್ಬಂದಿಗಳು, ಅರಣ್ಯ ಇಲಾಖೆಯ ಉಪ ವಲಯ ಅರಣ್ಯಧಿಕಾರಿಗಳು, ಸಿಬ್ಬಂದಿಗಳು, ಅಗ್ನಿಶಾಮಕದಳದ ಸಿಬ್ಬಂದಿಗಳು ಕಾರ್ಯಚರಣೆಯಲ್ಲಿ ಭಾಗವಹಿಸಿದರು ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!