Saturday, June 28, 2025
spot_imgspot_img
spot_imgspot_img

ಸುಳ್ಯ: ರೇಬಿಸ್ ರೋಗಕ್ಕೆ ಮಹಿಳೆ ಬಲಿ..!

- Advertisement -
- Advertisement -

ಸುಳ್ಯ: ತಿಂಗಳ ಹಿಂದೆ ನಾಯಿ ಕಡಿತಕ್ಕೆ ಒಳಗಾಗಿದ್ದ ಮಹಿಳೆ ಮೃತಪಟ್ಟ ಘಟನೆ ಸುಳ್ಯದ ಸಂಪಾಜೆಯಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆಯನ್ನು ಬೇಬಿ (42) ಎಂದು ಗುರುತಿಸಲಾಗಿದೆ.

ಮಹಿಳೆ ಫೆ.7ರಂದು ಅರಂತೋಡಿನಲ್ಲಿ ತೋಟದ ಕೆಲಸಕ್ಕೆ ತೆರಳಿದ್ದಾಗ ಅವರಿಗೆ ನಾಯಿಮರಿಯೊಂದು ಕಚ್ಚಿತ್ತು. ಆದರೆ ಮಹಿಳೆ ಈ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ ಹಾಗೂ ಚಿಕಿತ್ಸೆಯನ್ನೂ ಪಡೆದಿರಲಿಲ್ಲ ಎನ್ನಲಾಗಿದೆ.

ಸೋಮವಾರ ಆಕೆಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ಈ ವೇಳೆ ನೀರನ್ನು ನೋಡಿ ಬೊಬ್ಬೆ ಹಾಕುವುದು ಸಹಿತ ವಿಚಿತ್ರ ವರ್ತನೆ ತೋರುತ್ತಿದ್ದ ಆಕೆಯೊಂದಿಗೆ ವೈದ್ಯರು ಪೂರಕ ಮಾಹಿತಿ ಕೇಳಿದಾಗ ನಾಯಿ ಕಚ್ಚಿದ್ದ ಬಗ್ಗೆ ತಿಳಿಸಿದ್ದರು.

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮಾ.20ರಂದು ಮೃತಪಟ್ಟರು. ಆಕೆ ರೇಬಿಸ್‌ ಕಾಯಿಲೆಗೆ ತುತ್ತಾಗಿರುವುದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ.

- Advertisement -

Related news

error: Content is protected !!