- Advertisement -
- Advertisement -





ಸುಳ್ಯ: ಶಾಂತಿನಗರದಲ್ಲಿ ಮಹಿಳೆಯೊಬ್ಬರು ಬಾವಿಗೆ ಬಿದ್ದಿದ್ದು, ಅವರನ್ನು ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ರಕ್ಷಣೆ ಮಾಡಿದ ಘಟನೆ ವರದಿಯಾಗಿದೆ.
ಮಹಿಳೆ ಮನೆ ಸಮೀಪ ಬಾವಿಗೆ ಬಿದ್ದಿರುವ ವಿಷಯ ತಿಳಿದು ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಸ್ಥಳೀಯರಾದ ಮುಳುಗುತಜ್ಞ ಅಬ್ಬಾಸ್ ನೀರಿಗಿಳಿದು ಮಹಿಳೆಯನ್ನು ಅಗ್ನಿಶಾಮಕ ದಳದವರ ಸಹಾಯದಿಂದ ಮೇಲೆತ್ತಿದ್ದಾರೆ. ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -








