Sunday, June 29, 2025
spot_imgspot_img
spot_imgspot_img

ಸುಳ್ಯ: ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಪ್ರಕರಣ; ಆರೋಪಿ ತಾಯಿಗೆ ಶಿಕ್ಷೆ ಪ್ರಕಟ..!

- Advertisement -
- Advertisement -

ಸುಳ್ಯ: ತಾಯಿಯೊಬ್ಬಳು ತನ್ನ 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು, ಆರೋಪಿ ಸಾಬೀತಾಗಿದ್ದು ಆರೋಪಿ ತಾಯಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.

ಕಾವ್ಯಶ್ರಿ ಎಂಬವರು 2022ರ ಆ.16ರಂದು ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿರುವ ತನ್ನ ತಾಯಿಯ ಮನೆಯಲ್ಲಿ ತನ್ನ ವೈಯುಕ್ತಿಕ ವಿಚಾರವಾಗಿ ಹಾಲು ಬಿಸಿ ಮಾಡುವ ಪಾತ್ರೆಯನ್ನು ಗ್ಯಾಸ್ ಸ್ಟವ್ ನಿಂದ ಬಿಸಿ ಮಾಡಿ 5 ವರ್ಷ ಪ್ರಾಯದ ತನ್ನ ಮಗಳ ಎಡ ಕೆನ್ನೆಗೆ, ಬಲ ಕೈ ತೋಳಿಗೆ, ಎಡ ಕೈ ಭುಜಕ್ಕೆ, ಎಡ ಕಾಲಿನ ತೊಡೆಗೆ ಸುಟ್ಟು ನೋವುಂಟು ಮಾಡಿ ಗಾಯ ಮಾಡಿದ್ದರು. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಸಂರಕ್ಷಣಾ ಅಧಿಕಾರಿ ರಶ್ಮಿ ಅವರಿಗೆ ವಿಷಯ ಗೊತ್ತಾಗಿ ಅವರು ಸ್ಥಳ ಭೇಟಿ ಮಾಡಿದರಲ್ಲದೆ, ಸುಳ್ಯ ಪೊಲೀಸ್ ಠಾಣೆಯಲ್ಲಿ ತಾಯಿ ವಿರುದ್ಧ ದೂರು ದಾಖಲಿಸಿದ್ದರು.

ಸುಳ್ಯ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆದಿದ್ದು ಹಿರಿಯ ಸಿವಿಲ್‌ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಬಿ.ಮೋಹನ್‌ ಬಾಬು ಅವರು ಆಪಾದಿತೆಯನ್ನು ದೋಷಿಯೆಂದು ಘೋಷಿಸಿದ್ದಾರೆ. ಅಪಾದಿತೆಗೆ ಒಟ್ಟು 10 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 2 ತಿಂಗಳ ಸಾದಾ ಕಾರಗೃಹ ವಾಸದ ತೀರ್ಪು ನೀಡಿದೆ. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕರು ವಾದಿಸಿದ್ದರು.

- Advertisement -

Related news

error: Content is protected !!