Monday, June 8, 2026
spot_imgspot_img
spot_imgspot_img

ಸುಳ್ಯ: ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ; ಮಹಿಳೆ ಮೃತ್ಯು..!

- Advertisement -
- Advertisement -

ಸುಳ್ಯ: ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ಬಸ್ ನಿಲ್ದಾಣ ಮುಂಭಾಗದಲ್ಲಿ ನಡೆದಿದೆ.

ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಲಾರಿ ಸುಳ್ಯದ ಕೆಎಸ್ಆರ್ ಟಿ ಸಿ ಬಸ್ ನಿಲ್ದಾಣ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟರು. ಮೃತ ದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಅಂದಾಜು 40 ವರ್ಷ ಪ್ರಾಯದ ಮಹಿಳೆಯಾಗಿದ್ದು, ಗುರುತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!