Wednesday, May 1, 2024
spot_imgspot_img
spot_imgspot_img

ಸುಳ್ಯ: ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಯುವಕ..!!

- Advertisement -G L Acharya panikkar
- Advertisement -
vtv vitla

ಸುಳ್ಯ: ಬಂದೂಕಿನಿಂದ ಗುಂಡು ಹೊಡೆದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ವರದಿಯಾಗಿದೆ.

ಮೃತ ಯುವಕನನ್ನು ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ. ಈತ ಉಬರಡ್ಕ ಗ್ರಾಮದ ಬೆಳ್ಳಂಪಾಡಿ ಎಂಬಲ್ಲಿನ ಗುಡ್ಡದಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೇಳಲಾಗಿದೆ.

ಬೆಳ್ಳಂಪಾಡಿಯ ಮನೆಯೊಂದರಲ್ಲಿ ರವಿ ಕೆಲಸಮಯದಿಂದ ಕೆಲಸಕ್ಕಿದ್ದರೆನ್ನಲಾಗಿದ್ದು, ಕಳೆದ ರಾತ್ರಿ ಕೋವಿ ಹಿಡಿದು ಗುಡ್ಡಕ್ಕೆ ಹೋಗಿದ್ದ ರವಿ ಅಲ್ಲಿ ತಲೆಗೆ ಗುಂಡು ಹೊಡೆದುಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಸ್ಥಳಕ್ಕೆ ರಾತ್ರಿಯೇ ಪೋಲೀಸರು ಬಂದು ಮಹಜರು ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೇಲುನೋಟಕ್ಕೆ ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದ್ದು ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!