Saturday, June 28, 2025
spot_imgspot_img
spot_imgspot_img

ಸುಳ್ಯ: ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ; ಮಹಿಳೆ ಗಂಭೀರ ಗಾಯ..!

- Advertisement -
- Advertisement -

ಸುಳ್ಯ: ರಾತ್ರಿ ಮಲಗಿದ್ದ ವೇಳೆ ಮಹಿಳೆ ಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಬೆಳ್ಳಾರೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.

ಗಂಭೀರ ಗಾಯಗೊಂಡ ಮಹಿಳೆಯನ್ನು ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ಜಯಭಾರತಿ (56) ಎಂದು ಗುರುತಿಸಲಾಗಿದೆ.

ಜಯಭಾರತಿ ಎಂಬವರು ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಬಾವ ಶಂಕರ ಎಂಬಾತ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೆಂಕಿ ಹಚ್ಚಿರುವ ವ್ಯಕ್ತಿಗೂ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೌಟುಂಬಿಕ ವಿವಾದದ ಹಿನ್ನಲೆಯಲ್ಲಿ ಕೃತ್ಯ ಎಸಗಿರುವ ಬಗ್ಗೆ ಶಂಕಿಸಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!