- Advertisement -
- Advertisement -
ಸುಳ್ಯ: ಜಾಲ್ಸೂರು ಗ್ರಾಮದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ಕಾಸರಗೋಡಿನಿಂದ ಮಡಿಕೇರಿಗೆ ಕಡೆಗೆ ತೆರಳುತ್ತಿದ್ದ ಕಾರು ಜಾಲ್ಸೂರಿನ ಬೈದರಕೊಳಂಜಿ ತಿರುವಿನಲ್ಲಿ ರಸ್ತೆಯ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಈ ಕಾರಿನಲ್ಲಿ ಚಾಲಕ ಸೇರಿ ಇಬ್ಬರು ಪ್ರಯಾಣಿಕರಿದ್ದು, ಅಪಾಯದಿಂದ ಪಾರಾಗಿದ್ದಾರೆ.



- Advertisement -








