Thursday, June 4, 2026
spot_imgspot_img
spot_imgspot_img

ಸುಳ್ಯ: ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಸವಾರ ಗಂಭೀರ; ಕಾರು ನಿಲ್ಲಿಸದೇ ಚಾಲಕ ಪರಾರಿ

- Advertisement -
- Advertisement -

ಸುಳ್ಯ: ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ, ಕಾರು ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದು, ಬೈಕ್ ಸವಾರನ ಕಾಲಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಕನಕಮಜಲಿನಲ್ಲಿ ನಡೆದಿದೆ.

ಸುಳ್ಯದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಪುತ್ತೂರಿನಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಗೆ ಕನಕಮಜಲು ಗ್ರಾಮ ಪಂಚಾಯತ್ ಬಳಿ ಢಿಕ್ಕಿ ಹೊಡೆದಿದ್ದು, ಕಾರು ಚಾಲಕ ಅಪಘಾತ ನಡೆಸಿ, ನಿಲ್ಲಿಸದೇ ಪರಾರಿಯಾಗಿದ್ದು, ಬೈಕ್ ಸವಾರನ ಕೈ ಕಾಲುಗಳಿಗೆ ಗಂಭೀರವಾಗಿ ಗಾಯಗೊಂಡಿದೆ.

ಸ್ಥಳೀಯರ ಸಹಕಾರದಿಂದ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಕಾಲುಗಳಿಗೆ ಗಂಭೀರವಾಗಿ ಗಾಯವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಅಂಬ್ಯುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!