Monday, June 8, 2026
spot_imgspot_img
spot_imgspot_img

ಸುಳ್ಯ: ನಿಯಂತ್ರಣ ತಪ್ಪಿ ಮನೆಯ ಮಹಡಿ ಮೇಲೆ ಬಿದ್ದ ಕಾರು..!

- Advertisement -
- Advertisement -

ಸುಳ್ಯ: ನಿಯಂತ್ರಣ ತಪ್ಪಿ ಕಾರೊಂದು ಮನೆಯ ಮಹಡಿಯ ಮೇಲೆ ಬಿದ್ದು ಮನೆ ಮತ್ತು ಕಾರು ಜಖಂಗೊಂಡ ಘಟನೆ ನಡೆದಿದೆ.

ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿ ಯವರ ಸೊಸೆ ಅವರ ಮಾವನ ಕಾರನ್ನು ಚಲಾಯಿಸಿಕೊಂಡು ಗುತ್ತಿಗಾರು ಕಡೆಗೆ ಹೊರಟಿದ್ದರು.

ಚಿರೆಕಲ್‌ನ ಮನೆಯಿಂದ ಮುಖ್ಯ ರಸ್ತೆಗೆ ಬಂದು ಸ್ವಲ್ಪ ಮುಂದಕ್ಕೆ ಹೋದಾಗ ಕಾರಿಗೆ ಬ್ರೇಕ್ ಹಾಕಿದಾಗ ಬ್ರೇಕ್‌ನ ಅಡಿಗೆ ನೀರಿನ ಬಾಟಲ್ ಸಿಲುಕಿ ಬ್ರೇಕ್ ಸಿಗದ ಕಾರಣ ನಿಯಂತ್ರಣ ತಪ್ಪಿ ರಸ್ತೆಯ ಕೆಳಭಾಗದಲ್ಲಿದ್ದ ಸೀತಮ್ಮ ಚಿರೆಕಲ್ಲು ಎಂಬವರ ಮನೆಯ ಮಹಡಿಯ ಮೇಲೆ ಬಿದ್ದಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!