Saturday, June 28, 2025
spot_imgspot_img
spot_imgspot_img

ಸುಳ್ಯ: ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಅರೆಸ್ಟ್..!

- Advertisement -
- Advertisement -

ಸುಳ್ಯ: ಬಾಲಕಿ ಮಲಗಿದ್ದ ಕೋಣೆಗೆ ಮಧ್ಯರಾತ್ರಿ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಕಿರಾತಕ ಯುವಕನನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಮಂಡೆಕೋಲಿನಲ್ಲಿ ನಡೆದಿದೆ.

ಬಂಧೀತ ಆರೋಪಿಯನ್ನು ನಿತಿನ್ ಎಂದು ಗುರುತಿಸಲಾಗಿದೆ.

ಸುಳ್ಯ-ಮಂಡೆಕೋಲು ಖಾಸಗಿ ಬಸ್‍ನಲ್ಲಿ ನಿರ್ವಾಹಕ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ನಿತಿನ್ ಬುಧವಾರ ತಡರಾತ್ರಿ ಬಾಲಕಿಯ ಮನೆಗೆ ನುಗ್ಗಿ ಮಲಗಿದ್ದ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದ ಎನ್ನಲಾಗಿದೆ.

ಬಾಲಕಿ ಕಿರುಚಾಡಿದಾಗ ಮನೆಯವರು ಎಚ್ಚರಗೊಂಡು ಬೊಬ್ಬೆ ಹಾಕಿದಾಗ ಸ್ಥಳೀಯರ ಸಹಾಯದಿಂದ ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಆರೋಪಿ ನಿತಿನ್ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!