ಮತ್ತೋರ್ವ ಆರೋಪಿ ಗಡಿಪಾರಾಗಿದ್ದ ಮನು ಪೊಲೀಸರ ವಶದಲ್ಲಿ…?!




ಸುಳ್ಯ: ಬಾಡಿಗೆ ನೆಪದಲ್ಲಿ ಕರೆದುಕೊಂಡು ಹೋಗಿ ಮಾರಣಾಂತಿಕ ಹಲ್ಲೆ – ವ್ಯಕ್ತಿ ಸಾವು, ಕೊಲೆ ಪ್ರಕರಣ ದಾಖಲಿಸಿ ಇಬ್ಬರ ಬಂಧನಸುಳ್ಯ ಕಸ್ಬಾ ಗ್ರಾಮದ ನಿವಾಸಿ ಅಬ್ದುಲ್ ಜಬ್ಬಾರ್ (ವಯಸ್ಸು ವಿವರ ಲಭ್ಯವಿಲ್ಲ) ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಪ್ರಕರಣದ ಪಿರ್ಯಾದಿದಾರರಾದ ಸುಳ್ಯ ಕಸ್ಬಾ ನಿವಾಸಿ ಸುಮಯ್ಯಾ (35) ಅವರ ದೂರಿನಂತೆ, ದಿನಾಂಕ 16.10.2025ರಂದು ಮಧ್ಯಾಹ್ನ ವೇಳೆ ಮೊಹಮ್ಮದ್ ರಫೀಕ್ ಮತ್ತು ಇತರರು ಬಾಡಿಗೆ ವಿಷಯದ ನೆಪದಲ್ಲಿ ಅಬ್ದುಲ್ ಜಬ್ಬಾರ್ ಅವರನ್ನು ದುಗ್ಗಲಡ್ಕಕ್ಕೆ ಕರೆದುಕೊಂಡು ಹೋಗಿ ಕಿರುಕುಳ ನೀಡಿದ್ದು, ಬಳಿಕ ಸುಳ್ಯ ಕಲ್ಲುಗುಂಡಿಗೆ ಕರೆತಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿ ಕಳುಹಿಸಿದ್ದಾರೆ ಎಂದು ದೂರಲಾಗಿದೆ.ಮುಂದಿನ ದಿನವಾದ 17.10.2025ರಂದು ಅಬ್ದುಲ್ ಜಬ್ಬಾರ್ ಅವರು ಮನೆಯಲ್ಲಿದ್ದಾಗ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ದಿನಾಂಕ 18.10.2025ರಂದು ನೀಡಿದ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ. 125/2025, ಕಲಂ 105 ಜೊತೆಗೆ 3(5) BNS ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ತನಿಖೆಯ ವೇಳೆ ಆರೋಪಿಗಳ ಹಲ್ಲೆಯ ಪರಿಣಾಮವೇ ಅಬ್ದುಲ್ ಜಬ್ಬಾರ್ ಅವರ ಸಾವಿಗೆ ಕಾರಣವೆಂದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟ ಹಿನ್ನೆಲೆಯಲ್ಲಿ, ಪ್ರಕರಣವನ್ನು ಕಲಂ 103 ಜೊತೆಗೆ 3(5) BNS ಅಡಿಯಲ್ಲಿ ಕೊಲೆ ಪ್ರಕರಣವಾಗಿ ಪರಿವರ್ತಿಸಲಾಗಿದೆ.ಪ್ರಕರಣದ ತನಿಖೆ ಕೈಗೊಂಡಿರುವ ಪೊಲೀಸರು, ಸುಳ್ಯ ಕಸಬ ನಿವಾಸಿ ಮೊಹಮ್ಮದ್ ರಫೀಕ್ (41) ಎಂಬಾತನನ್ನು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮುಂದಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ಕೃತ್ಯಕ್ಕೆ ಬಳಸಿದ ಕಾರನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.ಇದೇ ವೇಳೆ ಪ್ರಕರಣದ ಇನ್ನೋರ್ವ ಆರೋಪಿಯಾದ ಸುಳ್ಯ ಸಂಪಾಜೆ ನಿವಾಸಿ ಮನೋಹರ್ ಕೆ.ಎಸ್ @ ಮನು (42) ಎಂಬಾತನನ್ನೂ ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ಮುಂದಿನ ತನಿಖೆ ಮುಂದುವರಿದಿದೆ.








