- Advertisement -
- Advertisement -
ಸುಳ್ಯ: ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅನ್ಯಕೋಮಿನ ಯುವಕ ಅನುಚಿತವಾಗಿ ವರ್ತಿಸಿದನೆಂದು ಯುವಕನಿಗೆ ಹಲ್ಲೆ ನಡೆಸಿದ್ದಾರೆಂಬ ಆರೋಪದಡಿ ಇಬ್ಬರು ಹಿಂದೂ ಸಂಘಟನೆಯ ಯುವಕರನ್ನು ಸುಳ್ಯ ಪೊಲೀಸರು ಬಂಧಿಸಿದ್ದು, ಯುವಕರ ಬಂಧನವನ್ನು ಖಂಡಿಸಿ ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ಸುಳ್ಯ ಪೊಲೀಸ್ ಠಾಣೆಯ ಮುಂಭಾಗದ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಲಾಯಿತು.
ಸುಳ್ಯ ಬಸ್ ನಿಲ್ದಾಣದಲ್ಲಿ ಸೇರಿದ ಹಿಂದೂ ಹಿತರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಎಬಿವಿಪಿ ಕಾರ್ಯಕರ್ತರು ಮೆರವಣಿಗೆ ಮೂಲಕ ಗಾಂಧಿನಗರ ಕಲ್ಕುಡ ದೈವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಅಲ್ಲಿಂದ ಮೆರವಣಿಗೆಯಲ್ಲಿ ಸುಳ್ಯ ಪೊಲೀಸ್ ಠಾಣೆ ಎದುರು ಆಗಮಿಸಿ, ಪ್ರತಿಭಟನೆ ನಡೆಸಿದರು. ಠಾಣೆಯೆದುರು ಸೇರಿದ ನಾಯಕರು ಹಾಗೂ ಎಬಿವಿಪಿ ಕಾರ್ಯಕರ್ತರು ಪೊಲೀಸರ ವಿರುದ್ಧ ಘೋಷಣೆ ಕೂಗಿದರು. ಠಾಣೆ ಎದುರಿನ ರಸ್ತೆಯಲ್ಲಿ ಕುಳಿತು ನ್ಯಾಯಕ್ಕಾಗಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಹಲವು ಪ್ರಮುಖರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.
- Advertisement -