Wednesday, June 17, 2026
spot_imgspot_img
spot_imgspot_img

ಸುಳ್ಯ : ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಮೃತ್ಯು

- Advertisement -
- Advertisement -

ಸುಳ್ಯ: ಹೊಟ್ಟೆ ನೋವು ಉಲ್ಬಣಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಾಲಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಮೃತ ಬಾಲಕನನ್ನು ಸುಳ್ಯ ಶಾಂತಿನಗರದ ಶ್ರೀಜಿತ್ (17) ಎಂದು ಗುರುತಿಸಲಾಗಿದೆ. ಸುಳ್ಯ ಶಾಂತಿನಗರ ನಿವಾಸಿ ಸಂಜೀವ ಎಂಬವರ ಪುತ್ರ ಶ್ರೀಜಿತ್‌ನಿಗೆ ಕಳೆದ ಎರಡು ದಿನಗಳಿಂದ ಹೊಟ್ಟೆ ನೋವು ಕಾಣಿಸಿದ್ದು, ರವಿವಾರ ನೋವು ಉಲ್ಬಣಗೊಂಡ ಪರಿಣಾಮ ಮನೆಯವರು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ತಂದು ಬಳಿಕ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಿದ್ದರು. ಅಲ್ಲಿ ಬಾಲಕನಿಗೆ ಕೂಡಲೇ ಶಸ್ತ್ರಚಿಕಿತ್ಸೆ ನಡೆಸಬೇಕೆಂದು ವೈದ್ಯರು ಹೇಳಿದಾಗ ಆತನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಶಸ್ತ್ರಚಿಕಿತ್ಸೆ ನಡೆಸಿದರು.

ಬಳಿಕ ಬಾಲಕನ ಸ್ಥಿತಿ ಗಂಭೀರವಾದಾಗ ಮಂಗಳೂರು ಖಾಸಗಿ ಆಸ್ಪತ್ರೆಗೆ ಕೊಂಡಯ್ಯುವಂತೆ ಅಲ್ಲಿಯ ವೈದ್ಯರು ಸೂಚಿಸಿದ್ದಾರೆ. ಆದರೆ ಸೋಮವಾರ ಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾರೆ. ಬಾಲಕನ ಸಾವಿಗೆ ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರು ಕಾರಣವೆಂದು ಬಾಲಕನ ಪೋಷಕರು ಮತ್ತು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!