Thursday, May 2, 2024
spot_imgspot_img
spot_imgspot_img

ಸುಳ್ಯ :ವಿಷ ಸೇವಿಸಿ ಯುವಕ ಆತ್ಮಹತ್ಯೆ..!

- Advertisement -G L Acharya panikkar
- Advertisement -

ಸುಳ್ಯ : ಕಳೆದ ಐದು ದಿನಗಳ ಹಿಂದೆ ವಿಷ ಸೇವಿಸಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದ ಘಟನೆ ಸುಳ್ಯದ ಆಲೆಟ್ಟಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಯುವಕ ಅಶೋಕ ಎಂದು ಗುರುತಿಸಲಾಗಿದೆ.

ಈತ ಡಿ.28ರಂದು ತಡರಾತ್ರಿ ವಿಷ ಸೇವಿಸಿದ್ದ ಎನ್ನಲಾಗಿದೆ. ಅರಂತೋಡಿನ ಸರ್ವೀಸ್ ಸ್ಟೇಷನ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ ವಿಷ ಸೇವಿಸಿ ಮನೆಗೆ ತೆರಳಿದ್ದ.ಇದನ್ನು ಗಮನಿಸಿದ ಮನೆಯವರು ಕೂಡಲೇ ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ್ದರು.

ಬಳಿಕ ವೈದ್ಯರ ಸಲಹೆಯಂತೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತು.ಅಲ್ಲಿಂದ ಚಿಕಿತ್ಸೆಗಾಗಿ ಸುರತ್ಕಲ್‌ನಲ್ಲಿರುವ ಶ್ರೀನಿವಾಸ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ನಿನ್ನೆ ತಡರಾತ್ರಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!