Friday, May 17, 2024
spot_imgspot_img
spot_imgspot_img

ಸುಳ್ಯ: ವಿದ್ಯುತ್‌ ತಗುಲಿ ಮಹಿಳೆ ಮೃತ್ಯು..!!

- Advertisement -G L Acharya panikkar
- Advertisement -

ಸುಳ್ಯ: ವಿದ್ಯುತ್ ಶಾಕ್ ತಗುಲಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಸಮೀಪದ ಬೊಮ್ಮಾರು ಬಳಿ ಸಂಭವಿಸಿದೆ.

ನೆಲ್ಲೂರು ಕೇಮ್ರಾಜೆ ಗ್ರಾಮದ ಬೊಮ್ಮಾರು ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ(55 ) ಎಂಬವರೇ ಮೃತ ದುರ್ದೈವಿ.

ಲಲಿತಾರವರು ಪ್ರತಿದಿನ ಮಲಗುವ ಸಮಯದಲ್ಲಿ‌ ಇನ್ವರ್ಟರ್ ಗೆ ವಿದ್ಯುತ್ ಸಂಪರ್ಕಿಸುವ ಪ್ಲಗ್ ನ್ನು ತೆಗೆದು ಮಲಗುತ್ತಿದ್ದರೆನ್ನಲಾಗಿದ್ದು, ನಿನ್ನೆ ರಾತ್ರಿಯೂ ಸುಮಾರು 10 ಗಂಟೆಯ ವೇಳೆಗೆ ಪ್ಲಗ್ ತೆಗೆಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದಿದೆ.

ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತದರೂ ಅಷ್ಟಾಗಲೇ ಅವರು ಮೃತಪಟ್ಟರೆಂದು ತಿಳಿದು ಬಂದಿದೆ. ಮೃತರು ಪತಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

- Advertisement -

Related news

error: Content is protected !!