Wednesday, November 6, 2024
spot_imgspot_img
spot_imgspot_img

ಕೊರೊನಾ ಗೆದ್ದು ಬಂದ ಸಂಸದೆ “ಸುಮಲತಾ ಅಂಬರೀಶ್”

- Advertisement -
- Advertisement -

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೊರೊನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕಳೆದ ಮೂರು ವಾರದ ಹಿಂದೆ ಸುಮಲತಾ ಅವರ ಕೊರೊನಾ ಟೆಸ್ಟ್ ವರದಿ ಪಾಸಿಟಿವ್ ಬಂದಿತ್ತು. ಹೀಗಾಗಿ ಅವರು ಜೆ.ಪಿ ನಗರದ ನಿವಾಸದಲ್ಲಿ ಹೋಂ ಕ್ವಾರಂಟೈನ್ ನಲ್ಲಿದ್ದರು. ಹೀಗಾಗಿ 2 ದಿನದ ಹಿಂದೆ ಕೊರೊನಾ ಟೆಸ್ಟ್ ಮಾಡಿಸಿದಾಗ ವರದಿ ನೆಗೆಟಿವ್ ಬಂದಿದೆ.

ಈ ಬಗ್ಗೆ ಸ್ವತಃ ಸುಮಲತಾ ಅಂಬರೀಶ್ ಟ್ವೀಟ್ ಮಾಡಿದ್ದಾರೆ. ನಿಮ್ಮೆಲ್ಲರ ಪ್ರಾರ್ಥನೆ, ಮೂರು ವಾರಗಳ ಕಡ್ಡಾಯ ಕ್ವಾರಂಟೈನ್ ಮುಗಿಸಿ ಕೋವಿಡ್ ನಿಂದ ಸಂಪೂರ್ಣ ಗುಣಮುಖಳಾಗಿದ್ದೇನೆ. ಪರೀಕ್ಷೆ ನಂತರ ಕೋವಿಡ್-19 ವರದಿ ನೆಗೆಟಿವ್ ಬಂದಿದೆ. ವೈದ್ಯರ ಸಲಹೆಯಂತೆ 4 ವಾರಗಳ ವಿಶ್ರಾಂತಿ ಪಡೆದು ನಿಮ್ಮೆಲ್ಲರ ಸೇವೆಗೆ ಮರಳಿ ಬರಲು ಕಾಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!