Sunday, July 19, 2026
spot_imgspot_img
spot_imgspot_img

ಕಸ ಎಸೆಯುವವರ ವಿರುದ್ದ ಸುಮೊಟೊ ಪ್ರಕರಣ ದಾಖಲಿಸಿ

- Advertisement -
- Advertisement -

ಗೃಹ ಸಚಿವರಿಗೆ ಎಂಎಲ್‌ಸಿ ಕಿಶೋರ್ ಕುಮಾ‌ರ್ ಮನವಿ

ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜನರು ರಸ್ತೆ ಬದಿ, ಇತರ ಸಾರ್ವಜನಿಕ ಸ್ಥಳಗಳಲ್ಲಿ ಬೇಕಾಬಿಟ್ಟಿಯಾಗಿ ಕಸ ಎಸೆಯುವುದನ್ನು ತಡೆಯಲು ಪೊಲೀಸ್ ಇಲಾಖೆಯಿಂದ ದಂಡ ವಿಧಿಸಿ ಸ್ವಯಂಪ್ರೇರಿತ(ಸುಮೊಟೊ) ಪ್ರಕರಣವನ್ನುದಾಖಲಿಸುವ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಗುರುವಾರ ಬೆಂಗಳೂರಿನಲ್ಲಿ ರಾಜ್ಯ ಗೃಹ ಸಚಿವ ಡಾ| ಜಿ.ಪರಮೇಶ್ವರ್‌ಅವರಿಗೆ ಮನವಿ ಮಾಡಿದ್ದಾರೆ.

ರಸ್ತೆ ಬದಿ, ಇತರ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವ ಪ್ರವೃತ್ತಿ ಹೆಚ್ಚುತ್ತಿರುವುದು ಅತ್ಯಂತ ಆತಂಕಕಾರಿ ವಿಷಯವಾಗಿದ್ದು, ಇದರಿಂದ ಪರಿಸರ ಮಾಲಿನ್ಯ ಹೆಚ್ಚುವುದರ ಜತೆಗೆ ಜನರ ಆರೋಗ್ಯಕ್ಕೂ ಹಾನಿಕಾರಕವಾಗಿದೆ. ಸ್ವಚ್ಛತೆ ಕಾಪಾಡುವ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಇದು ದೊಡ್ಡ ಅಡ್ಡಿಯಾಗಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ದ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಕಠಿನ ಕಾನೂನು ಕ್ರಮ ಕೈಗೊಳ್ಳುವುದು ಅತ್ಯಾವಶ್ಯಕವಾಗಿದೆ. ವಿಶೇಷವಾಗಿ ಇಂತಹ ಕೃತ್ಯಗಳಲ್ಲಿ ತೊಡಗಿರುವವರ ಮೇಲೆ ದಂಡ ವಿಧಿಸುವುದರ ಜತೆಗೆ ಪೊಲೀಸ್ ಇಲಾಖೆಯಿಂದ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸುವ ವ್ಯವಸ್ಥೆಯನ್ನು ಜಾರಿಗೆ ತರಬೇಕಾಗಿದೆ. ಆದುದರಿಂದ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಸೂಕ್ತ ಎಂದು ಮನವಿ ಮಾಡಿದ್ದಾರೆ.

- Advertisement -

Related news

error: Content is protected !!