Saturday, May 18, 2024
spot_imgspot_img
spot_imgspot_img

5,8, ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ

- Advertisement -G L Acharya panikkar
- Advertisement -

ಗೊಂದಲದ ನಡುವೆಯೇ ರಾಜ್ಯಾದ್ಯಂತ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆಗಳು ಆರಂಭವಾಗಿ, ರಾಜ್ಯದ ಎಲ್ಲಾ ಶಾಲೆಗಳಲ್ಲೂ ಸೋಮವಾರ ಮೊದಲ ದಿನದ ಪ್ರಥಮ ಭಾಷೆ ಕನ್ನಡ ಭಾಷಾ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಮಂಗಳವಾರ ಎರಡನೇ ದಿನ ದ್ವಿತೀಯ ಭಾಷೆ ಇಂಗ್ಲೀಷ್‌ ಭಾಷಾ ಪರೀಕ್ಷೆ ಕೂಡ ನಡೆದಿದೆ. ಇದರ ಮಧ್ಯೆ ಮೌಲ್ಯಾಂಕನ ಪರೀಕ್ಷೆ ರದ್ದು ಪಡಿಸಬೇಕೆಂದು ಖಾಸಗಿ ಶಾಲಾ ಸಂಘಟನೆ ರುಪ್ಸಾ ಸಲ್ಲಿಸಿರುವ ಮೇಲ್ಮನವಿ ಅರ್ಜಿಗೆ ಮನ್ನಣೆ ದೊರೆತಂತಾಗಿದೆ. ಹೀಗಾಗಿ ಸದ್ಯಕ್ಕೆ ನಡೆಸುತ್ತಿರುವ ಪರೀಕ್ಷೆಯನ್ನು ಸ್ಥಗಿತಗೊಳಿಸಬೇಕಿದೆ.

ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಾಂಕನ ನಡೆಸುವ ಸಂಬಂಧ ಘನ ಉಚ್ಚ ನ್ಯಾಯಾಲಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ದಿ:6-10-2023 ಮತ್ತು 9-10-2023ರ ಅಧಿಸೂಚನೆಗಳನ್ನು ಏಕ ಸದಸ್ಯ ಪೀಠದಲ್ಲಿ ರದ್ದುಮಾಡಲಾಗಿತ್ತು.

ಸದರಿ ತೀರ್ಪಿನ ವಿರುದ್ಧ ಸರ್ಕಾರವು ದಿನಾಂಕ: 7-3-2024 ರಂದು ಘನ ಉಚ್ಚನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದು, ಘನ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠವು ಪ್ರಕರಣವನ್ನು ಆಲಿಸಿ ಸದರಿ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಂಕನ ಕಾರ್ಯವನ್ನು ಮುಂದುವರೆಸಲು ಮಧ್ಯಂತರ ತೀರ್ಪು ನೀಡಲಾಗಿರುತ್ತದೆ. ಅದರಂತೆ ದಿನಾಂಕ: 11-03-2024ರಿಂದ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಮೌಲ್ಯಂಕನ ಕಾರ್ಯವನ್ನು ಪ್ರಾರಂಭಿಸಲಾಗಿತ್ತು.

ತದನಂತರ ರಾಜ್ಯ ಘನ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠದ ಮಧ್ಯಂತರ ತೀರ್ಪನ್ನು ಪ್ರಶ್ನಿಸಿ. ಮಾನ್ಯ ಸರ್ವೋಚ್ಚ ನ್ಯಾಯಾಲಯದಲ್ಲಿ ಎಸ್.ಎಲ್.ಪಿ ಸಂಖ್ಯೆ: 6256/2024. ಎಸ್.ಎಲ್.ಪಿ ಸಂಖ್ಯೆ: 6257/2024 ಮತ್ತು ಡೈರಿ ಸಂಖ್ಯೆ: 11192/2024 ದಾವೆಗಳನ್ನು ಹೂಡಿದ್ದು, ಸದರಿ ದಾವೆಗಳನ್ನು ವಿಚಾರಣೆ ನಡೆಸಿದ್ದು, ಈ ದಿನದ ಆದೇಶದಲ್ಲಿ ಸದರಿ ಮಧ್ಯಂತರ ತೀರ್ಪನ್ನು ರದ್ದುಪಡಿಸಿರುತ್ತದೆ ಮತ್ತು ಪ್ರಕರಣವನ್ನು ವಿಭಾಗೀಯ ಪೀಠಕ್ಕೆ ರವಾನಿಸಿರುತ್ತದೆ. ಈ ಹಿನ್ನೆಲೆಯಲ್ಲಿ ದಿನಾಂಕ: 13-3-2024ರಿಂದ ನಡೆಯಬೇಕಾಗಿದ್ದ 5. 8 ಮತ್ತು 9ನೇ ತರಗತಿಗಳ SA-2 ಮೌಲ್ಯಾಂಕನವನ್ನು ಮುಂದಿನ ಆದೇಶದವರೆಗೆ ಮುಂದೂಡುವಂತೆ ಶಾಲೆಗಳಿಗೆ ಸೂಚಿಸಲಾಗಿದೆ .

- Advertisement -

Related news

error: Content is protected !!