Wednesday, November 25, 2026
spot_imgspot_img
spot_imgspot_img

ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್, 2 ವಾರಗಳಲ್ಲಿ ಶರಣಾಗಲು ಆದೇಶ

- Advertisement -
- Advertisement -

ನವದೆಹಲಿ: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಬೇಲ್ ಮೇಲೆ ಹೊರಗೆ ಬಂದಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಯ ಜಾಮೀನು ರದ್ದುಗೊಳಿಸಿ, 2 ವಾರಗಳಲ್ಲಿ ಸೆಷನ್ಸ್‌ ಕೋರ್ಟ್‌ಗೆ ಶರಣಾಗುವಂತೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ನೀಡಿರುವ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಸಿಬಿಐ ಮತ್ತು ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಹಾಗೂ ಕೊಲೆಯಾದ ಯೋಗೇಶ್ ಗೌಡ ಅವರ ಸಹೋದರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ.ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠ, ಜಾಮೀನು ರದ್ದು ಮಾಡಿ ಆದೇಶ ನೀಡಿದೆ. 2 ವಾರಗಳಲ್ಲಿ ಸೆಷನ್ಸ್ ಕೋರ್ಟ್‌ಗೆ ಶರಣಾಗುವಂತೆ ಆದೇಶಿಸಿದೆ.

“ಎಸ್‌ಎಲ್‌ಪಿ ಮೂಲಕ ಸಲ್ಲಿಸಲಾದ ಈ ಕ್ರಿಮಿನಲ್ ಮೇಲ್ಮನವಿಯಲ್ಲಿ ಪ್ರಶ್ನಿಸಲಾದ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಲಾಗಿದೆ. ಅಪರಾಧಿಗಳು ನೀಡಿರುವ ಜಾಮೀನು ಬಾಂಡ್‌ಗಳು ರದ್ದಾಗಿದ್ದು, ಅವರು 2 ವಾರಗಳ ಒಳಗಾಗಿ ಸಂಬಂಧಪಟ್ಟ ನ್ಯಾಯಾಲಯದ ಮುಂದೆ ಶರಣಾಗಬೇಕು” ಎಂದು ಸುಪ್ರೀಂ ತಿಳಿಸಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ 2026ರ ಏಪ್ರಿಲ್ 15ರಂದು ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿತು. ಏಪ್ರಿಲ್ 17ರಂದು ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಯಿತು. ಮತ್ತೊಬ್ಬ ಆರೋಪಿ ಚನ್ನಕೇಶವ ಟಿಂಗರಿಕರ್‌ಗೆ ಏಳು ವರ್ಷಗಳ ಶಿಕ್ಷೆ ವಿಧಿಸಲಾಯಿತು ಎಂದು ತಿಳಿದುಬಂದಿದೆ.

- Advertisement -

Related news

error: Content is protected !!