Thursday, July 23, 2026
spot_imgspot_img
spot_imgspot_img

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ನವದೆಹಲಿ: ಅಸ್ಸಾಂ ಪೊಲೀಸರು ದಾಖಲಿಸಿರುವ ಮಾನನಷ್ಟ ಮತ್ತು ಫೋರ್ಜರಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಏಪ್ರಿಲ್ 24ರಂದು ಗುವಾಹಟಿ ಹೈಕೋರ್ಟ್ ಖೇರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶವನ್ನು ಬದಲಿಸುವ ಮೂಲಕ ಅವರಿಗೆ ಬಂಧನದಿಂದ ರಕ್ಷಣೆ ನೀಡಿದೆ. ಈ ಪ್ರಕರಣವು ರಾಜಕೀಯ ದ್ವೇಷದಿಂದ ಕೂಡಿದ್ದು, ಆರೋಪಿಯು ತನಿಖೆಗೆ ಸಹಕರಿಸುತ್ತಿರುವಾಗ ಬಂಧನದ ಅಗತ್ಯವಿಲ್ಲ ಎಂದು ನ್ಯಾ.ಜೆ.ಕೆ. ಮಹೇಶ್ವರಿ ಹಾಗೂ ನ್ಯಾ.ಅತುಲ್ ಚಂದೂರ್ಕರ್ ಅವರ ಪೀಠ ಹೇಳಿದೆ.

ರಾಜಕೀಯ ಪೈಪೋಟಿಯಿಂದ ಪ್ರೇರಿತವಾದ ಪ್ರಕರಣಗಳಲ್ಲಿ ವೈಯಕ್ತಿಕ ಸ್ವಾತಂತ್ರ್ಯವನ್ನು ಹಗುರವಾಗಿ ಪರಿಗಣಿಸಲು ಅಥವಾ ಮೊಟಕುಗೊಳಿಸಲು ಸಾಧ್ಯವಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿಂಕಿ ಭುಯಾನ್ ಶರ್ಮಾ ಅವರು ಪವನ್ ಖೇರಾ ವಿರುದ್ಧ ಮಾನನಷ್ಟ ಮತ್ತು ದಾಖಲೆಗಳ ದುರುಪಯೋಗದ (ಫೋರ್ಜರಿ) ಆರೋಪ ಹೊರಿಸಿ ದೂರು ದಾಖಲಿಸಿದ್ದರು.

ಈ ಹಿಂದೆ ಏಪ್ರಿಲ್ 15ರಂದು ತೆಲಂಗಾಣ ಹೈಕೋರ್ಟ್ ನೀಡಿದ್ದ ಮಧ್ಯಂತರ ರಕ್ಷಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿತ್ತು ಮತ್ತು ಗುವಾಹಟಿ ಹೈಕೋರ್ಟ್ ಸಂಪರ್ಕಿಸಲು ಸೂಚಿಸಿತ್ತು. ಆದರೆ ಏಪ್ರಿಲ್ 24ರಂದು ಗುವಾಹಟಿ ಹೈಕೋರ್ಟ್ ಜಾಮೀನು ನಿರಾಕರಿಸಿದ ಬಳಿಕ ಅವರು ಮತ್ತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಖೇರಾ ಅವರು ಸಾರ್ವಜನಿಕವಾಗಿ ನೀಡಿದ ಹೇಳಿಕೆಗಳು ಮತ್ತು ಸಲ್ಲಿಕೆಯಾದ ದಾಖಲೆಗಳು ನಕಲಿ ಎಂಬ ಆರೋಪದ ಮೇಲೆ ಅಸ್ಸಾಂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!