Thursday, April 25, 2024
spot_imgspot_img
spot_imgspot_img

ಕಾನೂನು ಉಲ್ಲಂಘಿಸಿ ತಬ್ಲಿಗಿ ಸಮಾವೇಶದಲ್ಲಿ ಭಾಗಿ-ವಿದೇಶಿಯರ ವಿಚಾರಣೆ ತ್ವರಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ

- Advertisement -G L Acharya panikkar
- Advertisement -

ನವದೆಹಲಿ(ನ.3): ಕೊರೋನಾ ಮಹಾಮಾರಿಯ ಮಧ್ಯೆ ಕಾನೂನು ಉಲ್ಲಂಘಿಸಿ ತಬ್ಲಿಗಿ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ವಿದೇಶಿಯರ ವಿಚಾರಣೆ ತ್ವರಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಈ ಸಂಬಂಧ ಎಲ್ಲ ಜಿಲ್ಲಾ ನ್ಯಾಯಾಲಯಗಳಿಗೆ ಸುಪ್ರೀಂ ಕೋರ್ಟ್ ಈ ಸೂಚನೆ ನೀಡಿದೆ. ಮುಖ್ಯವಾಗಿ ಇಂಡೋನೇಷ್ಯಾದ ಹಲವು ಪ್ರಜೆಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಭಾರತದಲ್ಲಿ ಕೊರೋನಾದ ಆರಂಭಿಕ ಹಂತದಲ್ಲಿ ತಬ್ಲಿಗಿ ಸಮಾವೇಶ ನಡೆಸಲಾಗಿತ್ತು. ಇದರಲ್ಲಿ ಹಲವು ವಿದೇಶಿಯರು ಭಾಗವಹಿಸಿದ್ದರು. ಈ ಸಮಾವೇಶದಲ್ಲಿ ಕೊರೋನಾ ಮಾರ್ಗ ಸೂಚಿ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು.

ಇದರಿಂದ ಹಲವು ವಿದೇಶಿಯರು ಸ್ವದೇಶಕ್ಕೆ ತೆರಳಲು ಸಾಧ್ಯವಾಗದೆ ಭಾರತದಲ್ಲಿ ಉಳಿದುಕೊಂಡಿದ್ದಾರೆ ಎಂದು ವರದಿಯಾಗಿದೆ.

- Advertisement -

Related news

error: Content is protected !!