Wednesday, September 23, 2026
spot_imgspot_img
spot_imgspot_img

ವಂದೇ ಮಾತರಂ ಹಾಡಲು ನಿರಾಕರಿಸಿದರೆ ಶಿಕ್ಷೆ ಇಲ್ಲ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

- Advertisement -
- Advertisement -

ನವದೆಹಲಿ: ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸಿರುವ ನಿಯಮ ಹಾಗೂ ಅದನ್ನು ಉಲ್ಲಂಘಿಸಿದರೆ ಶಿಕ್ಷೆ ವಿಧಿಸುವ ಕಾನೂನಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಮಹತ್ವದ ಸೂಚನೆ ನೀಡಿದೆ.

ಆತ್ಮಸಾಕ್ಷಿಯ ಆಧಾರದ ಮೇಲೆ ಅಥವಾ ಧಾರ್ಮಿಕ ನಂಬಿಕೆಯ ಕಾರಣಕ್ಕೆ ಯಾರಾದರೂ ವಂದೇ ಮಾತರಂ ಹಾಡಲು ನಿರಾಕರಿಸಿದರೆ ಅವರನ್ನು ದಂಡನಾತ್ಮಕ ಕ್ರಮಗಳಿಗೆ ಗುರಿಪಡಿಸುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಕರ್ನಾಟಕದಲ್ಲಿ ವಂದೇ ಮಾತರಂ ಗಾಯನ ಕಡ್ಡಾಯಗೊಳಿಸುವ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಇತ್ತೀಚೆಗಷ್ಟೇ ವಿಧಾನಮಂಡಲ ಅಧಿವೇಶನದಲ್ಲೂ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿತ್ತು. ಹೀಗೆ ಕರ್ನಾಟಕದಲ್ಲಿ ಈ ಕುರಿತ ಸಂಘರ್ಷದ ಕಿಡಿ ಜೋರಾಗಿರುವ ಸಂದರ್ಭದಲ್ಲೇ, ಸುಪ್ರೀಂ ಕೋರ್ಟ್ ಈ ನಿರ್ದೇಶನವನ್ನು ನೀಡಿದೆ.

ಪ್ರಸಿದ್ಧ ಕರ್ನಾಟಕ ಸಂಗೀತ ಗಾಯಕ ಟಿ.ಎಂ. ಕೃಷ್ಣ ಅವರು, ವಂದೇ ಮಾತರಂನ ಎಲ್ಲಾ ಆರು ಚರಣಗಳನ್ನು ಕಡ್ಡಾಯವಾಗಿ ಹಾಡಬೇಕು ಎಂದು ಕೇಂದ್ರ ಸರ್ಕಾರ ಜಾರಿಗೆ ತಂದ ನಿಯಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. 2026ರಲ್ಲಿ ತಿದ್ದುಪಡಿ ಮಾಡಲಾದ ‘ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ, 1971’ ರ ಸೆಕ್ಷನ್ 3 ಹಾಗೂ ಗೃಹ ಸಚಿವಾಲಯದ ಸುತ್ತೋಲೆಗಳನ್ನು ಅವರು ಪ್ರಶ್ನಿಸಿದ್ದರು.

ತಿದ್ದುಪಡಿ ಮಾಡಿದ ನಿಯಮದ ಪ್ರಕಾರ, ರಾಷ್ಟ್ರೀಯ ಗೀತೆ ಹಾಡುವುದನ್ನು ತಡೆದರೆ 3 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿತ್ತು. ವಂದೇ ಮಾತರಂನ ಕೊನೆಯ ನಾಲ್ಕು ಚರಣಗಳು ದೇಶದ ಜಾತ್ಯತೀತ ಸ್ವರೂಪಕ್ಕೆ ಮತ್ತು ಸಂವಿಧಾನದ 25 ಹಾಗೂ 26ನೇ ವಿಧಿಗಳ (ಧಾರ್ಮಿಕ ಸ್ವಾತಂತ್ರ್ಯ) ಆಶಯಕ್ಕೆ ವಿರುದ್ಧವಾಗಿವೆ ಎಂಬುದು ಅರ್ಜಿದಾರರ ಪ್ರಮುಖ ವಾದವಾಗಿತ್ತು.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿರುವುದಾಗಿ ತಿಳಿದುಬಂದಿದೆ

- Advertisement -

Related news

error: Content is protected !!