Friday, June 5, 2026
spot_imgspot_img
spot_imgspot_img

ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ

- Advertisement -
- Advertisement -

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಿ 42ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.

ಇಂದು ಸಿಐಡಿ ಕಸ್ಟಡಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರು ಸೂರಜ್‌ಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಿದ್ದಾರೆ. ಇದರಿಂದ ಸೂರಜ್ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ

ಸೂರಜ್ ರೇವಣ್ಣ ಪರ ವಕೀಲರು, ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಐಡಿಗೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ಹೀಗಾಗಿ ನಾಳೆಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ.

- Advertisement -

Related news

error: Content is protected !!