Sunday, May 5, 2024
spot_imgspot_img
spot_imgspot_img

ಸುರತ್ಕಲ್ : ಎರಡು ಬಸ್ ಗಳ ನಡುವೆ ಅಪಘಾತ; 30ಕ್ಕೂ ಅಧಿಕ ಮಂದಿಗೆ ಗಾಯ-ಆಸ್ಪತ್ರೆಗೆ ದಾಖಲು

- Advertisement -G L Acharya panikkar
- Advertisement -

ಸುರತ್ಕಲ್: ಖಾಸಗಿ ಬಸ್ ಮತ್ತು ಸರ್ಕಾರಿ ಬಸ್ ಗಳ ನಡುವೆ ಅಪಘಾತ ಸಂಭವಿಸಿ ಸುಮಾರು 30 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ ರಾ.ಹೆ.66ರ ಮುಕ್ಕ ಜಂಕ್ಷನ್ ನಲ್ಲಿ ನಡೆದಿದೆ.

ಸರ್ಕಾರಿ ಮತ್ತು ಖಾಸಗಿ ಬಸ್ ಎರಡೂ ಮಂಗಳೂರು ಕಡೆಗೆ ಸಂಚರಿಸುತ್ತಿತ್ತು ಎನ್ನಲಾಗಿದೆ. ಬೆಳಗ್ಗೆ ಮಂದಗತಿಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ಎದುರಿನಿಂದ ಹೋಗುತ್ತಿದ್ದ ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆಯಿತೆನ್ನಲಾಗಿದೆ.

ಅಪಘಾತದಿಂದ ಎರಡೂ ಬಸ್ ಗಳ ಸುಮಾರು 30 ಮಂದಿ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ವಿಭಾಗದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!