Sunday, June 7, 2026
spot_imgspot_img
spot_imgspot_img

ಸುರತ್ಕಲ್: ಟ್ಯಾಂಕರ್‌ಗಳಿಂದ ಡೀಸೆಲ್ ಕಳ್ಳತನ; ನಾಲ್ವರ ಬಂಧನ..!

- Advertisement -
- Advertisement -

ಸುರತ್ಕಲ್: ಟ್ಯಾಂಕರ್‌ಯಾರ್ಡ್‌ನಲ್ಲಿ ನಿಲ್ಲಿಸಿರುವ ಟ್ಯಾಂಕರ್‌ಗಳಿಂದ ಡೀಸೆಲ್ ಕದಿಯುವ ಗ್ಯಾಂಗ್ ಒಂದನ್ನು ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕುಳಾಯಿಗುಡ್ಡೆ ನಿವಾಸಿ ಸಂತೋಷ್(42), ಕಾಟಿಪಳ್ಳ ನಿವಾಸಿ ಐರನ್ ರಿತೇಶ್ ಮಿನೇಜ್(36), ಬೆಳ್ತಂಗಡಿ ನಿವಾಸಿ ನಾರಾಯಣ್(23), ಉಡುಪಿಯ ಹೆಜಮಾಡಿ ನಿವಾಸಿ ರವಿ ಜನಾರ್ದನ ಪುತ್ರನ್ (59) ಎಂದು ಗುರುತಿಸಲಾಗಿದೆ.

ಮಂಗಳೂರಿನ ಹೊರವಲಯದ ಬಾಳ ಗ್ರಾಮದ ಬಳಿ ಇರುವ ಟ್ಯಾಂಕರ್‌ಯಾರ್ಡ್‌ನಲ್ಲಿ ನಿಲ್ಲಿಸಿರುವ ಟ್ಯಾಂಕರ್‌ಗಳಿಂದ ಈ ಗ್ಯಾಂಗ್ ಡೀಸೆಲ್ ಕಳವು ಮಾಡುತ್ತಿತ್ತು. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಡೀಸೆಲ್ ಕಳವುಗೈದು ದಾಸ್ತಾನು ಇರಿಸಿದ್ದ ಶೆಡ್ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳು ದಾಸ್ತಾನು ಇರಿಸಿಟ್ಟಿದ್ದ 1685 ಲೀಟರ್ ಡಿಸೇಲ್ ಮತ್ತು 20 ಲೀಟರ್ ಪೆಟ್ರೋಲ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

Related news

error: Content is protected !!