Thursday, June 18, 2026
spot_imgspot_img
spot_imgspot_img

ಸುರತ್ಕಲ್‌: ಕ್ಷುಲ್ಲಕ ಕಾರಣಕ್ಕೆ ಮಸೀದಿಯಲ್ಲಿ ಗಲಾಟೆ; ಕಾರ್ಯದರ್ಶಿಗೆ ಚೂರಿ ಇರಿದ ಯುವಕ

- Advertisement -
- Advertisement -

ಸುರತ್ಕಲ್: ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವ ಮಸೀದಿ ಕಾರ್ಯದರ್ಶಿಗೆ ಚೂರಿ ಇರಿದಿರುವ ಘಟನೆ ಸುರತ್ಕಲ್ ಕಾನ ಜನತ ಕಾಲೋನಿ ಮಸೀದಿ ಬಳಿ ನಡೆದಿದೆ.

ಇಲ್ಲಿನ ಕಾನ ಕಾಲನಿ ನಿವಾಸಿ ಮುಹಮ್ಮದ್ ಶಾಫಿ(35) ಚೂರಿ ಇರಿತಕ್ಕೊಳಗಾದವರು. ಅದೇ ಪರಿಸರದ ಯುವಕ ತ್ವಾಹಿರ್ (24) ಚೂರಿಯಿಂದ ಇರಿದ ಆರೋಪಿ ಎಂದು ತಿಳಿದು ಬಂದಿದೆ.

ಗುರುವಾರ ರಾತ್ರಿ ಕಾಲನಿ ಮಸೀದಿಯ ಲೈಟ್ ಆಫ್ ವಿಚಾರದಲ್ಲಿ ಗಲಾಟೆ ನಡೆದು ಮಾತಿಗೆ ಮಾತು ಬೆಳೆದು ಜಗಳವಾಡಿಕೊಂಡಿದ್ದಾರೆ ಎನ್ನಲಾಗಿದ್ದು, ತ್ವಾಹಿರ್ ತನ್ನ ಕಾರಿನಲ್ಲಿ ತಂದಿದ್ದ ಚೂರಿಯಿಂದ ತನಗೆ ಚುಚ್ಚಿದ್ದಾನೆ ಎಂದು ಹಲ್ಲೆಗೊಳಗಾದ ಶಾಫಿ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಇರಿತದಿಂದ ಶಾಫಿಯ ಕೈ ಮತ್ತು ಬೆನ್ನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!