Monday, June 8, 2026
spot_imgspot_img
spot_imgspot_img

ಸುರತ್ಕಲ್: ನಿಯಂತ್ರಣ ತಪ್ಪಿ ಲಾರಿಯಡಿಗೆ ಬಿದ್ದ ಬೈಕ್; ಸವಾರ ಗಂಭೀರ ಗಾಯ..!

- Advertisement -
- Advertisement -

ಸುರತ್ಕಲ್: ಲಾರಿಯಡಿಗೆ ಬಿದ್ದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಮುಕ್ಕ ಸಮೀಪ ನಡೆದಿದೆ.

ಅತಿ ವೇಗದಿಂದ ಚಲಿಸುತ್ತಿದ್ದ ಲಾರಿ ಸಡನ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಲಾರಿಯಡಿ ತೂರಿದೆ. ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಸ್ಕಾಂಗೆ ಸೇರಿದ ಲಾರಿ ಇದಾಗಿದ್ದು, ವಿದ್ಯುತ್ ಕಂಬಗಳನ್ನು ಸಾಗಿಸುತ್ತಿತ್ತು. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!