Sunday, June 29, 2025
spot_imgspot_img
spot_imgspot_img

ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಬರ್ಬರ ಕೊಲೆ

- Advertisement -
- Advertisement -

ಬಂಟ್ವಾಳಅ.(21):ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿದ್ದ ಮುಖಂಡ ಸುರೇಂದ್ರ ಬಂಟ್ವಾಳ್ ರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಇಂದು ಮಧ್ಯಾಹ್ನ ಬೆಳಕಿಗೆ ಬಂದಿದೆ.

ಸುರೇಂದ್ರ ಬಂಟ್ವಾಳ್ ಬಿಸಿರೋಡ್ ನಲ್ಲಿರುವ ತನ್ನ ವಸತಿ ಗ್ರಹದಲ್ಲಿ ವಾಸವಿದ್ದು,ಅಲ್ಲಿ ಅವರು ಹತ್ಯೆಯಾದರೀತಿ ಪತ್ತೆಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಸುರೇಂದ್ರ ಬಂಟ್ವಾಳ್ ಆಪ್ತರೇ ಕೃತ್ಯದಲ್ಲಿ ಶಾಮೀಲಾಗಿರುವ ಸಂಶಯ ವ್ಯಕ್ತವಾಗಿದೆ.

ಹಿಂದೆ ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿದ್ದ ಸುರೇಂದ್ರ ಬಂಟ್ವಾಳ್ ಬಿಸಿರೋಡ್, ಬಂಟ್ವಾಳ ಪರಿಸರದಲ್ಲಿ ಸಂಘಟನೆಯನ್ನು ಬಲಪಡಿಸಲು ಶ್ರಮಿಸಿದ್ದರು. ಭೂಗತ ಜಗತ್ತಿನ ಜೊತೆ ಹೆಸರು ಕೇಳಿಬಂದಿತ್ತಾದರೂ ,ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿದ್ದರು. ಸುರೇಂದ್ರರನ್ನು ಯಾರು ಯಾವ ಕಾರಣಕ್ಕೆ ಹತ್ಯೆಗೈದರು ಎನ್ನುವುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬರಬೇಕಿದೆ.

- Advertisement -

Related news

error: Content is protected !!